ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದ (MUDA scam) ಆರೋಪದಲ್ಲಿ ಲೋಕಾಯುಕ್ತ ಈಗಾಗಲೇ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತು ಉಳಿದ ಆರೋಪಿಗಳಿಗೆ ಕ್ಲೀನ್ ಚಿಟ್ (Clean chit) ನೀಡಿದ್ದರೂ ಸಹ ವಿಪಕ್ಷಗಳು ಈ ಬಗ್ಗೆ ಆರೋಪ ಮಾಡುವುದನ್ನು ನಿಲ್ಲಿಸುತ್ತಿಲ್ಲ.

ಈಗಲೂ ಸಿಎಂ ಸಿದ್ದರಾಮಯ್ಯ ಮುಡಾ ಕೇಸ್ ಏನಾಗುತ್ತದೋ ಎಂಬ ಚಿಂತೆಯಲ್ಲಿದ್ದಾರೆ. ಈ ಕೇಸ್ ನಲ್ಲಿ ಅವರು ಜೈಲಿಗೆ ಹೋಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಒಂದೆಡೆ ಬಸ್ ನಿರ್ವಾಹಕನ ಮೇಲೆ ಪುಂಡಾಟಿಕೆ ನಡೆದಿದೆ. ಮತ್ತೊಂದೆಡೆ ಕೋರಮಂಗಲದಲ್ಲಿ ಸಾಮೂಹಿಕ ಅತ್ಯಾಚಾರವಾಗಿದೆ. ಆದ್ರೆ ರಾಜ್ಯ ಸರ್ಕಾರ ಮಾತ್ರ ಲೂಟಿ ಮಾಡುವುದರಲ್ಲಿ ತಲ್ಲೀನವಾಗಿದೆ ಎಂದು ಟೀಕಿಸಿದ್ದಾರೆ.