ಕಾವೇರಿ ನೀರಿನ ಬಗ್ಗೆ ಕುರಿತು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬಾರದು ಅಂತ ಕನ್ನಡ ಪರ ಸಂಘಟನೆಗಳು ಹೋರಾಟ ಮಾಡಿದ್ದವು. ಇದೀಗ ಚಿತ್ರರಂಗದ ಪರವಾಗಿ ದರ್ಶನ್ ಧ್ವನಿ ಎತ್ತಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಅನೇಕರು ಖಂಡಿಸಿದ್ದಾರೆ. ಇದೀಗ ಚಾಲೆಂಜಿಗ್ ಸ್ಟಾರ್ ದರ್ಶನ್ ಕೂಡ ಕಾವೇರಿ ಪರ ಧ್ವನಿ ಎತ್ತಿದ್ದಾರೆ
ಕಾವೇರಿ ನೀರಿನ ಬಗ್ಗೆ ಕುರಿತು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬಾರದು ಅಂತ ಕನ್ನಡ ಪರ ಸಂಘಟನೆಗಳು ಹೋರಾಟ ಮಾಡಿದ್ದವು. ಇದೀಗ ಚಿತ್ರರಂಗದ ಪರವಾಗಿ ದರ್ಶನ್ ಧ್ವನಿ ಎತ್ತಿದ್ದಾರೆ.
ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ ಎಂದು ದರ್ಶನ್ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.