ನವದೆಹಲಿ : ಅಕ್ಟೋಬರ್ 12ರಂದು ನಡೆದ ‘ಸುಪ್ರೀಂ ಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ವಿಚಾರವಾಗಿ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ನಾಯಕರಿಗೆ ನೋಟಿಸ್ ಜಾರಿ ಮಾಡಿದೆ. ನಾಲ್ವರು ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.
ಪ್ರತಿಭಟನೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ವರೆಗೂ ಮೆರವಣಿಗೆ ನಡೆಸಿದ್ದಲ್ಲದೆ, ಮುಖ್ಯ ನ್ಯಾಯಮೂರ್ತಿಗಳು ಹಾಗೂ ನ್ಯಾಯಾಧೀಶರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ಗಳನ್ನು ಪ್ರದರ್ಶಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಾಯಕರ ನಡವಳಿಕೆ ಕುರಿತು ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಗಳು ತೀವ್ರ ಬೇಸರ ಹೊರಹಾಕಿದ್ದು, ಮುಖಂಡರು ಹೊರಗೊಂದು ಹೇಳಿ ಒಳಗೆ ಮತ್ತೊಂದು ಹೇಳುವ ವರ್ತನೆ ಸರಿಯಲ್ಲ ಎಂದು ಚಾಟಿ ಬೀಸಿದ್ದಾರೆ. ತಮ್ಮ ನಡವಳಿಕೆಯ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಸೂಚಿಸಿದ ನ್ಯಾಯಪೀಠ, ಯಾರೂ ಕೂಡ ಸುಪ್ರೀಂ ಕೋರ್ಟ್ ಅನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಕಟುವಾಗಿ ಎಚ್ಚರಿಸಿದೆ.
ಘಟನೆಗೆ ಸಂಬಂಧಿಸಿದಂತೆ ಅಂದಿನ ಸಿಸಿಟಿವಿ ಫೂಟೇಜ್ಗಳನ್ನು ಕೂಡ ನ್ಯಾಯಾಲಯ ಪರಿಶೀಲಿಸುತ್ತಿದ್ದು, ಯಾರು ಯಾವ ರೀತಿಯಲ್ಲಿ ವರ್ತಿಸಿದ್ದಾರೆ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಪೋಸ್ಟ್ಗಳನ್ನು ಯಾರು ಬಿತ್ತರಿಸಿದ್ದಾರೆ ಎಂಬುದರ ಕುರಿತು ಕೂಲಂಕಷ ತನಿಖೆ ನಡೆಯುತ್ತಿದೆ.
BREAKING : ಪಾಕಿಸ್ತಾನದಲ್ಲಿ ಭೀಕರ ದುರಂತ : ಶಾಲೆಯ ಛಾವಣಿ ಕುಸಿದು 28 ಮಕ್ಕಳು, ಶಿಕ್ಷಕಿ ದುರ್ಮರಣ | Children dead






