10ರಿಂದ 15 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ದರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಶುಕ್ರವಾರ (ಆಗಸ್ಟ್ 18) ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, “ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಆಗಸ್ಟ್ 20ಕ್ಕೆ ಉದ್ಘಾಟನೆಯಲಿದೆ ಜಾಲಿವುಡ್- ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಥೀಮ್ ಪಾರ್ಕ್
“ಯಾರ್ಯಾರು ಬರಲಿದ್ದಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಖಚಿತ” ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.