ರೋಗಿಗಳಿಗೆ ಅವಧಿ ಮೀರಿದ ಗ್ಲುಕೋಸ್ ನೀಡಿ ಮೂವರು ರೋಗಿಗಳು ಅಸ್ವಸ್ಥಗೊಂಡ ಘಟನೆ ಚಾಮರಾಜನಗರ ತಾಲೂಕು ಉಡಿಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಗ್ಲುಕೋಸ್ಸ್ ನೀಡಿದ ಬಳಿಕ ರೋಗಿಗಳು ಅಸ್ವಸ್ಥಗೊಂಡಿದ್ದು ವಿಷಯ ತಿಳಿದ ರೋಗಿಗಳ ಸಂಬಂಧಿಕರು ಜಮಾಹಿಸಿದ್ದಾರೆ. ಇಲ್ಲಿನ ವೈದ್ಯರು ಗೊತ್ತಿದ್ದು ಸಹ ಅವಧಿ ಮೀರಿದ ಔಷಧಿ ನೀಡುತ್ತಿದ್ದಾರೆಂದು ರೋಗಿಗಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿಗಳು ಅಸ್ವಸ್ಥಗೊಂಡ ಕೂಡಲೇ ವೈದ್ಯರು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಆಸ್ಪತ್ರೆಯ ಉಗ್ರಾಣದಲ್ಲಿ ಮತ್ತಷ್ಟು ಅವಧಿ ಮೀರಿದ ಔಷಧಿಗಳ ಪತ್ತೆಯಾಗಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ಕಾಳ ಪ್ರತಿಭಟನೆ ಕೂಡ ದಾಖಲಾಗಿದೆ. ಈಗ ಅವರು ಯಡಪುರದ ಸಿಮ್ಸ್ ಬೋಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿದ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅವಧಿ ಮೀರಿದ ಗ್ಲುಕೋಸ್ ಮಾತ್ರವಲ್ಲದೇ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಚಾಮರಾಜನಗರ ಗ್ರಾಮಾಂತರ ಠಾಣೆಯ ಪೊಲೀಸರು ವೈದ್ಯಾಧಿಕಾರಿ ಡಾ.ಉಮಾರಾಣಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ವಿಶ್ವೇ ಶ್ವರಯ್ಯ ಅವರು ತಿಳಿಸಿದ್ದಾರೆ.
ಅಧಿಕಾರಿ ಡಾ.ಕೆ.ಎಂ.ವಿಶ್ವೇ ಶ್ವರಯ್ಯ ಖಾಸಗಿ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ್ದು, ‘ವಿಷಯ ತಿಳಿದ ತಕ್ಷಣಕ್ಕೆ ಉಡಿಗಾಲಕ್ಕೆ ಬಂದಿದ್ದೇ ನೆ. ಅವಧಿ ಮೀರಿದ ಔಷಧಿಗಳು ಕಂಡು ಬಂದಿವೆ. ಈಗಾಗಲೇ ಪೊಲೀಸರು ವೈದ್ಯಾಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ನಾನು ಜಿಲ್ಲಾಧಿಕಾರಿ ಅವರಿಗೆ ವರದಿ ನೀಡುತ್ತೇ ನೆ. ಅವರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ.













