• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸ ಪಕ್ಷ ಸ್ಥಾಪನೆ ಬಗ್ಗೆ ಚಂಪೈ ಸೊರೆನ್ ಘೋಷಣೆ;ಜಾರ್ಖಂಡ್‌

ಪ್ರತಿಧ್ವನಿ by ಪ್ರತಿಧ್ವನಿ
August 21, 2024
in Top Story, ಇತರೆ / Others, ರಾಜಕೀಯ
0
Share on WhatsAppShare on FacebookShare on Telegram

ನವದೆಹಲಿ: ಸ್ವಪಕ್ಷದ ಬಗ್ಗೆ ತೀವ್ರ ಬೇಸರಗೊಂಡು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಬಲವಾಗಿ ಕೇಳುತ್ತಿರುವ ಬೆನ್ನಲ್ಲೇ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ (Jharkhand Mukti Morcha-JMM)ದ ಹಿರಿಯ ನಾಯಕ ಚಂಪೈ ಸೊರೆನ್ (Champai Soren) ಹೊಸ ಸ್ಥಾಪನೆ ಬಗ್ಗೆ ಘೋಷಿಸಿದ್ದಾರೆ.

ADVERTISEMENT

ಚಂಪೈ ಸೊರೆನ್ ಬುಧವಾರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ.ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಚಂಪೈ, ನಾನು ನಿವೃತ್ತಿ ಹೊಂದುವುದಿಲ್ಲ; ನಾನು ಪಕ್ಷವನ್ನ ಬಲಪಡಿಸುತ್ತೇನೆ, ಹೊಸ ಪಕ್ಷವನ್ನ ಬಲಪಡಿಸುತ್ತೇನೆ ಮತ್ತು ದಾರಿಯಲ್ಲಿ ಉತ್ತಮ ಸ್ನೇಹಿತನನ್ನ ಭೇಟಿಯಾದರೆ, ಅವರೊಂದಿಗೆ ಮುಂದುವರಿಯುತ್ತೇನೆ ‘ ಎಂದು ಹೇಳಿದ್ದಾರೆ.

VIDEO | Former Jharkhand chief minister Champai Soren (@ChampaiSoren) announces to float a new political party, and also keeps doors open for alliance.

"I had mentioned three options – retirement, organisation or friend. I will not retire; I will strengthen the party, a new… pic.twitter.com/LfQABpo6Lh

— Press Trust of India (@PTI_News) August 21, 2024

ಕೆಲವು ದಿನಗಳ ಹಿಂದೆ ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಮಾಡಿರುವ ಚಂಪೈ, ತಮ್ಮ ಮುಂದೆ ಮೂರು ಆಯ್ಕೆಗಳಿವೆ ಎಂದಿದ್ದಾರೆ.ಭಾರವಾದ ಹೃದಯದಿಂದ, ನಾನು ಅದೇ ಶಾಸಕಾಂಗ ಪಕ್ಷದ ಸಭೆಯಲ್ಲಿ “ಇಂದಿನಿಂದ ನನ್ನ ಜೀವನದ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ಹೇಳಿದ್ದೆ. ಇದರಲ್ಲಿ ನನಗೆ ಮೂರು ಆಯ್ಕೆಗಳಿವೆ, ಮೊದಲನೆಯದಾಗಿ, ರಾಜಕೀಯದಿಂದ ನಿವೃತ್ತಿ, ಎರಡನೆಯದು, ನನ್ನದೇ ಆದ ಪ್ರತ್ಯೇಕ ಸಂಘಟನೆಯನ್ನು ಸ್ಥಾಪನೆ ಮತ್ತು ಮೂರನೆಯದಾಗಿ, ನಾನು ಈ ಹಾದಿಯಲ್ಲಿ ಮತ್ತೊಬ್ಬ ಜೊತೆಗಾರನನ್ನು ಹುಡುಕಿಕೊಳ್ಳುವುದು(ಪರೋಕ್ಷವಾಗಿ ಬಿಜೆಪಿ ಸೇರ್ಪಡೆ) ಆ ದಿನದಿಂದ ಇಂದಿನವರೆಗೆ ಮತ್ತು ಮುಂಬರುವ ಜಾರ್ಖಂಡ್ ಅಸೆಂಬ್ಲಿ ಚುನಾವಣೆಯವರೆಗೆ, ಈ ಪ್ರಯಾಣದಲ್ಲಿ ನನಗೆ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ ಎಂದು ಪೋಸ್ಟ್‌ ಮಾಡಿದ್ದರು.

ನಾನು ಒಳಗೊಳಗೇ ಒಡೆದು ಚೂರಾಗಿದ್ದೇನೆ.ಏನು ಮಾಡಬೇಕೆಂದು ನನಗೆ ಅರ್ಥವಾಗಲಿಲ್ಲ. ಎರಡು ದಿನಗಳ ಕಾಲ ನಾನು ಶಾಂತವಾಗಿ ಕುಳಿತು ಆತ್ಮಾವಲೋಕನ ಮಾಡಿಕೊಂಡೆ, ಇಡೀ ಘಟನೆಯಲ್ಲಿ ನನ್ನ ತಪ್ಪನ್ನು ಹುಡುಕುತ್ತಲೇ ಇದ್ದೆ. ನನಗೆ ಅಧಿಕಾರದ ದುರಾಸೆ ಸ್ವಲ್ಪವೂ ಇರಲಿಲ್ಲ, ಆದರೆ ನನ್ನ ಸ್ವಾಭಿಮಾನಕ್ಕೆ ಈ ಹೊಡೆತ ಬಿದ್ದಿದೆ.ನನ್ನ ಸ್ವಂತ ಜನರು ಉಂಟುಮಾಡಿದ ನೋವನ್ನು ನಾನು ಎಲ್ಲಿ ವ್ಯಕ್ತಪಡಿಸಬಹುದು?” ಎಂದು ಚಂಪೈ ಸೊರೆನ್ ಪೋಸ್ಟ್‌ನಲ್ಲಿ ತಿಳಿಸಿದ್ದರು.

Tags: Champai Soren)Jharkhand CMJharkhand Mukti Morcha-JMM
Previous Post

ಜೆಜೆಎಂ ಕಳಪೆಯಾಗಲು ಅಧಿಕಾರಿಗಳು, ಗುತ್ತಿಗೆದಾರರೇ ಹೊಣೆ: ಪ್ರಭು ಚವ್ಹಾಣ ಆಕ್ರೋಶ

Next Post

ಭಾರತದಿಂದ ಜಪಾನ್ʼಗೆ ಹಸಿರು ammonia ರಫ್ತು: ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post

ಭಾರತದಿಂದ ಜಪಾನ್ʼಗೆ ಹಸಿರು ammonia ರಫ್ತು: ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada