• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಹಾಲಿ ಸಿಎಂಗೆ ಆರೋಗ್ಯಕರ, ಶಾಂತಿಯುತ ದೀರ್ಘಾಯುಷ್ಯವನ್ನು ಕೋರಿದ ಮಾಜಿ ಸಿಎಂ ಜಗನ್ ಮೋಹನ್‌ ರೆಡ್ಡಿ..

ಪ್ರತಿಧ್ವನಿ by ಪ್ರತಿಧ್ವನಿ
April 20, 2026
in Top Story
0
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!
Share on WhatsAppShare on FacebookShare on Telegram

ಬೆಂಗಳೂರು : ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರಿಗೆ ಹಲವಾರು ಗಣ್ಯರು ಶುಭಕೋರಿದ್ದಾರೆ. ಚಂದ್ರಬಾಬು ನಾಯ್ಡು ಒಬ್ಬ ಕಠಿಣ ಪರಿಶ್ರಮಿ’ ಮತ್ತು ‘ಒಳ್ಳೆಯ ಸ್ನೇಹಿತ’ ಎಂದು ಪ್ರಧಾನಿ ನರೇಂದ್ರ ಮೋದಿ ಟಿಡಿಪಿ ನಾಯಕನಿಗೆ ವಿಶ್ ಮಾಡಿದ್ದಾರೆ.

ADVERTISEMENT
DR ANJANAPPA : ಎಸಿಯಿಂದ ಕಣ್ಣಿನ ಮೇಲೆ ಏನು ಎಫೆಕ್ಟ್..? #pratidhvani

 ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ. ಚಂದ್ರಬಾಬು ನಾಯ್ಡು ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶ ಪ್ರಗತಿಯ ಹೊಸ ಎತ್ತರವನ್ನು ಏರುತ್ತಿದೆ ಎಂದು ಮೋದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಆತ್ಮೀಯ ಸ್ನೇಹಿತನಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ನಾಯ್ಡು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ನಿಮ್ಮ ಅವಿಶ್ರಾಂತ ಸೇವಾ ಸಮರ್ಪಣೆ ಆಂಧ್ರಪ್ರದೇಶವನ್ನು ಪ್ರಗತಿ ಮತ್ತು ನಾವೀನ್ಯತೆಯ ಹಾದಿಯಲ್ಲಿ ಮುನ್ನಡೆಸುತ್ತಿದೆ. ನಿಮಗೆ ಉತ್ತಮ ಆರೋಗ್ಯ ಮತ್ತು  ಇನ್ನಷ್ಟು ವರ್ಷಗಳ ಕಾಲ ಸಾರ್ವಜನಿಕ ಸೇವೆಯನ್ನು ಮಾಡುವ ಶಕ್ತಿ ದೊರೆಯಲಿ ಎಂದು ಹಾರೈಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಪ್ರಮುಖ ಪಾಲುದಾರನಾಗಿರುವ ಟಿಡಿಪಿಯ ಸಿಎಂ ನಾಯ್ಡು, ಕೂಡ ಪ್ರಧಾನಿ ಮತ್ತು ಗೃಹ ಸಚಿವರ ಶುಭಾಶಯಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಆರೋಗ್ಯಕರ, ಶಾಂತಿಯುತ ದೀರ್ಘಾಯುಷ್ಯವನ್ನು ಕೋರಿದ ಜಗನ್..

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಯನ್ ಕೂಡ ಸಿಎಂ ನಾಯ್ಡು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿ ಜನಸೇನಾ ನಾಯಕ, ಮುಖ್ಯಮಂತ್ರಿಯಾಗಿ ಆಡಳಿತದಲ್ಲಿ ತಮ್ಮ ವ್ಯಾಪಕ ಅನುಭವ ಹೊಂದಿರುವ ನಾಯ್ಡು, ತಮ್ಮ ದೂರದೃಷ್ಟಿಯೊಂದಿಗೆ ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವ ದೊಡ್ಡ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ :  ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..: 

ರಾಜಧಾನಿಯ ನಿರ್ಮಾಣ ಮತ್ತು ಪೋಲವರಂ ಯೋಜನೆಯ ಪೂರ್ಣಗೊಳಿಸುವಿಕೆಯಂತಹ ಗುರಿಗಳನ್ನು ಅವರು ಹೊಂದಿದ್ದಾರೆ. ರಾಜ್ಯವನ್ನು ಹೂಡಿಕೆ ತಾಣವಾಗಿ ಇರಿಸುವ ಮೂಲಕ, ನಾಯ್ಡು ಯುವಕರಿಗೆ ಉದ್ಯೋಗ ಕಲ್ಪಿಸುವ ವಾತಾವರಣ ಸೃಷ್ಟಿಸಿದ್ದಾರೆ. ಉತ್ತಮ ಆಡಳಿತ ಎಂಬ ಘೋಷಣೆಯನ್ನು ನನಸಾಗಿಸಲು ಶ್ರಮಿಸುತ್ತಿರುವ ಚಂದ್ರಬಾಬು ಅವರ ಆಡಳಿತದಲ್ಲಿ, ಆಂಧ್ರಪ್ರದೇಶವು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತದೆ. ನಾಯ್ಡು ಅವರಿಗೆ ದೇವರು ಸಂಪೂರ್ಣ ಆರೋಗ್ಯ ಮತ್ತು ಸಂತೋಷವನ್ನು ದಯಪಾಲಿಸಲಿ ಅಂತ ನಾನು ಪ್ರಾರ್ಥಿಸುತ್ತೇನೆ ಎಂದು ಪವನ್‌ ಕಲ್ಯಾಣ್‌ ಶುಭ ಕೋರಿದ್ದಾರೆ.

ಇನ್ನೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಕೂಡ ಚಂದ್ರಬಾಬು ನಾಯ್ಡು ಅವರಿಗೆ ಆರೋಗ್ಯಕರ ಮತ್ತು ಶಾಂತಿಯುತ ದೀರ್ಘಾಯುಷ್ಯ ಲಭಿಸಲಿ ಎಂದು ಶುಭ ಹಾರೈಸಿದ್ದಾರೆ.

ಅಲ್ಲದೆ ಆಂಧ್ರಪ್ರದೇಶವು ನಾಯ್ಡು ಅವರಂತಹ ದೂರದೃಷ್ಟಿ, ಅಭಿವೃದ್ದಿಯ ಗುರಿ ಮತ್ತು ಅಚಲ ಬದ್ಧತೆಯ ನಾಯಕರಿಂದ ಮಾರ್ಗದರ್ಶನ ಪಡೆದಿರುವುದು ಅದೃಷ್ಟ ಎಂದು ತೆಲುಗು ಸೂಪರ್‌ಸ್ಟಾರ್ ಕೆ. ಚಿರಂಜೀವಿ ಕೂಡ ಚಂದ್ರಬಾಬು ನಾಯ್ಡು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.. ನಿಮ್ಮ ಸೇವಾ ಪ್ರಯಾಣವು ಇಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ.  ಯಾವಾಗಲೂ ಶಕ್ತಿ, ಉತ್ತಮ ಆರೋಗ್ಯ ಮತ್ತು ರಾಜಕೀಯದಲ್ಲಿ ಇನ್ನಷ್ಟು ಕಾಲ ಅತ್ಯುತ್ತಮ ಸೇವೆ ನೀಡುವಂತಾಗಲಿ ಎಂದು ಚಿರಂಜೀವಿ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಟಿಡಿಪಿ ನಾಯಕನಿಗೆ ವಿಶ್‌ ಮಾಡಿದ್ದಾರೆ.

Tags: Actor ChiranjeeviAmit ShahAndhra Pradesh Chief MinisterBirth Day WishesN chandrbabu NaiduNarendra ModiNDA Aliiancepawan kalyanPM ModiPratidhvaniTDPTelugu Desham Partyunion home ministerY S Jaganmohan Reddy
Previous Post

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

Next Post

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

"ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada