ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ (76) ಅವರು ಮಂಗಳವಾರ ಬೆಳಗ್ಗೆ ಮೃತರಾಗಿದ್ದಾರೆ.
ಇತ್ತೀಚೆಗೆ ಅವರು ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಜನವರಿ ೩ ರಂದು ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ 6.15ಕ್ಕೆ ನಿಧನರಾಗಿದ್ದಾರೆ.
ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಅವರ ನಿವಾಸ ಸಿರಿ ಸಂಪಿಗೆಯಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.