ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ ಮಾಡುವ ಮೂಲಕ ಬಿಎಂಆರ್ ಸಿಎಲ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದೆ.
ಮೆಟ್ರೋ ರೈಲುಗಳು ಇದುವರೆಗೆ ಪ್ರತಿ 20 ನಿಮಿಷಕ್ಕೊಮ್ಮೆ ಸಂಚರಿಸುತ್ತಿತ್ತು. ಇನ್ನು ಮುಂದೆ ಪ್ರತಿ 15 ನಿಮಿಷಕ್ಕೊಮ್ಮೆ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಮೆಟ್ರೋ ರೈಲು ಪ್ರತಿ 20 ನಿಮಿಷಕ್ಕೊಮ್ಮೆ ಸಂಚರಿಸುವುದರಿಂದ ರಾತ್ರಿ ಪ್ರಯಾಣಿಕರಿಗೆ ಸಮಸ್ಯೆ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಪ್ರತಿ 15 ನಿಮಿಷಕ್ಕೊಮ್ಮೆ ರೈಲು ಪ್ರಯಾಣಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


