• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಹಿಂದೆ ರಾಜಕೀಯ ಧ್ವೇಷವಿದೆ -ಸಿದ್ದರಾಮಯ್ಯ

Any Mind by Any Mind
August 7, 2021
in ಕರ್ನಾಟಕ
0
ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಹಿಂದೆ ರಾಜಕೀಯ ಧ್ವೇಷವಿದೆ -ಸಿದ್ದರಾಮಯ್ಯ
Share on WhatsAppShare on FacebookShare on Telegram

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಪ್ರಯತ್ನಕ್ಕೆ ಸರ್ಕಾರ ಕೈ ಹಾಕುವುದು ಸೂಕ್ತವಲ್ಲ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ. ಜೊತೆಗೆ ಇದು ದ್ವೇಷದ ರಾಜಕಾರಣವಾಗುತ್ತದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ADVERTISEMENT

ಇಂದಿರಾ ಕ್ಯಾಂಟೀನ್‍ಗೆ ಅನ್ನಪೂರ್ಣ ಹೆಸರಿಡಬೇಕೆಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು “ರಸ್ತೆ, ಕ್ರೀಡಾಂಗಣ, ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ನಾಯಕರ ಹೆಸರು ನಾಮಕರಣ ಮಾಡುವುದು ಮೊದಲಿನಿಂದಲೂ ನಡೆದು ಬಂದಿರುವ ಪದ್ಧತಿ. ಬೆಂಗಳೂರಿನ ಮೇಲು ಸೇತುವೆಗೆ ದೀನದಯಾಳ್ ಉಪಾಧ್ಯಾಯ, ನಗರ ಸಾರಿಗೆಗೆ ವಾಜಪೇಯಿ, ಗುಜರತ್ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅರುಣ್ ಅವರ ಹೆಸರು ಏಕೆ ಇಡಲಾಗಿದೆ. ಬದಲಿಸುವುದಾದರೆ ಈ ಹೆಸರುಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಲಿ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ದಲಿತರು, ಬಡವರ ವಿರೋಧಿ

ತಮ್ಮ ನಿವಾಸದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದದರಾಮಯ್ಯ ಅವರು, ಮೇಜರ್ ಧ್ಯಾನ್‍ಚಂದ್ ಅವರು ಶ್ರೇಷ್ಠ ಹಾಕಿ ಪಟು ಎಂಬುದರಲ್ಲಿ ಎರಡು ಮಾತಿಲ್ಲ. ಬೇರೆ ಪ್ರಶಸ್ತಿಗೆ ಅವರ ಹೆಸರು ಇಡಬಹುದಾಗಿತ್ತು. ರಾಜೀವ್‍ಗಾಂಧಿಯವರ ಹೆಸರೇಕೆ ಬದಲಿಸಬೇಕು. ದೇಶಕ್ಕಾಗಿ ಸೇವೆ ಸಲ್ಲಿಸಿದವರ ನೆನಪಿಗೆ ರಾಷ್ಟ್ರೀಯ ನಾಯಕರುಗಳ ಹೆಸರುಗಳನ್ನು ನಾಮಕರಣ ಮಾಡಲಾಗುತ್ತದೆ. 

ಒಂದು ಪಕ್ಷ ಅಧಿಕಾರಕ್ಕೆ ಬಂದಾಗ ಈ ಮೊದಲು ಅಧಿಕಾರದಲ್ಲಿದ ಪಕ್ಷದವರು ನಾಮಕರಣ ಮಾಡಿದ ಹೆಸರು ಬದಲಾವಣೆ ಮಾಡುವುದು ದ್ವೇಷದ ರಾಜಕಾರಣ. ಇಂದಿರಾ ಗಾಂಧಿಯವರು ಬಡವರ ಪರ ಶ್ರಮಿಸಿದ್ದರು. ಗರೀಬಿ ಹಠಾವೋ ಎಂದವರು. ಜೊತೆಗೆ ಉಳುವವನೇ ಭೂಮಿ ಒಡೆಯ ಕಾನೂನು ಜಾರಿಗೆ ತಂದವರು. ಹೀಗಾಗಿ ಹೀಗಾಗಿ ಇಂದಿರಾ ಕ್ಯಾಂಟೀನ್‍ಗೆ ಅವರ ಹೆಸರು ಇಡಲಾಗಿದೆ. ಬಿಜೆಪಿಗೆ ಬಡವರ ಬಗ್ಗೆಯೇ ಕಾಳಜಿ ಇಲ. ಇದ್ದಿದ್ದರೆ ಬಡವರಿಗೆ ಕೊಡುತ್ತಿದ್ದ ಏಳು ಕೆ.ಜಿ. ಅಕ್ಕಿ ಪ್ರಮಾಣವನ್ನು ಕಡಿಮೆ ಮಾಡಿದ್ದೇಕೆ ? ಅವರಿಗೆ ದಲಿತರು, ಬಡವರು, ಸಾಮಾಜಿಕ ನ್ಯಾಯದ ಬಗ್ಗೆ ಕಾಳಜಿ ಇದೆಯೇ ? ಬಿಜೆಪಿಯವರು ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್ ಕಂಪನಿಗಳ ಪರ ಇರುವವರು ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಹಿಂದೆ ರಾಜಕೀಯ ಧ್ವೇಷವಿದೆ -ಸಿದ್ದರಾಮಯ್ಯ #Siddaramaiah #IndiraCanteen

ರವಿಯವರು ಬಿಜೆಪಿ ಪ್ರಧಾನ ಕಾರ್ಯದರ್ಶಿ. ಅವರು ಹೇಳಿದ್ದೇ ತೀರ್ಮಾನವಲ್ಲ.  ಸರ್ಕಾರದ ನಿರ್ಧಾರ ಏನು ಎಂಬುದನ್ನು ನೋಡೋಣ.

ಸಚಿವ ಸಂಪುಟದ ಬಗ್ಗೆ ನಿರೀಕ್ಷೆಗಳಿಲ್ಲ

ಹೊಸ ಸಚಿವ ಸಂಪುಟದ ಬಗ್ಗೆ ಯಾವ ಆಶಾ ಭಾವನೆಯೂ ಇಲ್ಲ. ಬಹುತೇಕ ಹಳಬರೇ ಸಂಪುಟದಲ್ಲಿದ್ದಾರೆ. ಹೀಗಾಗಿ ಹೊಸದನ್ನು ನಿರೀಕ್ಷಿಸಲು ಹೇಗೆ ಸಾಧ್ಯ ? ಮಂತ್ರಿ ಮಂಡಲದಲ್ಲಿ 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ಇಲ್ಲ. ಹಳೆಯ ಮೈಸೂರು ಭಾಗಕ್ಕೆ ಅವಕಾಶ ಕಡಿಮೆಯಾಗಿದೆ. ರಾಜ್ಯದಲ್ಲಿ ಶೇ. 24.1 ರಷ್ಟು ದಲಿತರಿದ್ದಾರೆ. ಆದರೆ, ಪರಿಶಿಷ್ಟರಿಗೆ ನಾಲ್ಕು ಸ್ಥಾನ ಮಾತ್ರ ನೀಡಲಾಗಿದೆ. ಭೋವಿಗಳಿಗೆ, ಕೊರಚ, ಕೊರಮರಿಗೆ ಅವಕಾಶ ಕೊಟ್ಟಿಲ್ಲ. ನಾವಿದ್ದಾಗ ಪ್ರಮಖ ಖಾತೆಗಳನ್ನು ಆ ಸಮುದಾಯದವರಿಗೆ ನೀಡಲಾಗಿತ್ತು. ಒಟ್ಟಾರೆ ಸಂಪುಟದಲ್ಲಿ ಪ್ರಾದೇಶಿಕ ಸಮೋತಲನ ಹಾಗೂ ಸಾಮಾಜಿಕ ನ್ಯಾಯಕ್ಕೆ ಅವಕಾಶವೇ ಇಲ್ಲ.

ಇಡಿ ದಾಳಿ ಹಿಂದೆ ರಾಜಕೀಯ ದುರುದ್ದೇಶ

ಸಾಮಾನ್ಯವಾಗಿ ಐಟಿ ದಾಳಿಯಾದ ಬಳಿಕ ಅವರ ಶಿಫಾರಸು ಪ್ರಕಾರ ಇಡಿಯವರು ದಾಳಿ ಮಾಡುತ್ತಾರೆ. ಅದು ಆದಾಯ ಮೀರಿ ಆಸ್ತಿ ಗಳಿಸಿದ್ದರೆ, ಅಕ್ರಮವಾಗಿ ಹಣ ವರ್ಗಾವಣೆ ಅಥವಾ ದುರುಪಯೋಗವಾಗಿದ್ದರೆ ಮಾತ್ರ. ಆದರೆ, ಜಮೀರ್ ಅಹಮದ್ ಅವರ ಮನೆಯ ಮೇಲೆ ಇಡಿಯವರು ಏಕಾಏಕಿ ದಾಳಿ ನಡೆಸಿದ್ದಾರೆ. ಇದು ರಾಜಕೀಯ ಪ್ರೇರಿತರ ಹಾಗೂ ಇದರ ಹಿಂದೆ ದುರುದ್ದೇಶ ಅಡಗಿದೆ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮೀರ್ ಅಹಮದ್ ಅವರು ಮನೆ ಕಟ್ಟಿದ್ದಾರೆ ಅಷ್ಟೆ. ಹಣ ದುರುಪಯೋಗ ಅಥವಾ ಅಕ್ರಮ ವರ್ಗಾವಣೆ ಎಲ್ಲಿ ಆಗಿದೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯವರ ಮೇಲೆ ಏಕೆ ದಾಳಿ ನಡೆಯುವುದಿಲ್ಲ. ಅವರೆಲ್ಲ ಬಡವರೇ, ಬಿಪಿಎಲ್ ಕಾರ್ಡುದಾರರೇ ? ಕಾಂಗ್ರೆಸ್ಸಿಗರನ್ನೇ ಟಾರ್ಗೆಟ್ ಮಾಡುವುದೇಕೆ ? ಜಮೀರ್ ಅಹಮದ್ ಅವರು ನನ್ನ ಆಪ್ತರು. ಅದೇ ರೀತಿ ಹಲವಾರು ಮಂದಿ ನನಗೆ ಆಪ್ತರಿದ್ದಾರೆ. ಬಿಜೆಪಿಯಲ್ಲಿಯೂ ಇದ್ದಾರೆ. ಆದರೆ, ಸ್ನೇಹ ಬೇರೆ, ರಾಜಕೀಯ ಬೇರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Tags: BJPCongress Partyಬಿಜೆಪಿಸಿದ್ದರಾಮಯ್ಯ
Previous Post

ಪ್ರೀಪೇಯ್ಡ್‌ ಸ್ಮಾರ್ಟ್‌ ಮೀಟರ್‌: ಮೊದಲೇ ಹಣ ಕಟ್ಟಿ ವಿದ್ಯುತ್‌ ಬಳಸುವ ವಿಧಾನದ ಪ್ರಯೋಗಕ್ಕೆ ಇಳಿದ ಬೆಸ್ಕಾಂ

Next Post

ಧ್ಯಾನ್ ಚಂದ್ ದೇಶದ ಆಸ್ತಿ, ಆದರೆ ಖೇಲ್ ರತ್ನ ಪ್ರಶಸ್ತಿ ಮರುನಾಮಕರಣ ದ್ವೇಷದ ರಾಜಕಾರಣ – ಡಿ.ಕೆ ಶಿವಕುಮಾರ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಧ್ಯಾನ್ ಚಂದ್ ದೇಶದ ಆಸ್ತಿ, ಆದರೆ ಖೇಲ್ ರತ್ನ ಪ್ರಶಸ್ತಿ ಮರುನಾಮಕರಣ ದ್ವೇಷದ ರಾಜಕಾರಣ – ಡಿ.ಕೆ ಶಿವಕುಮಾರ್

ಧ್ಯಾನ್ ಚಂದ್ ದೇಶದ ಆಸ್ತಿ, ಆದರೆ ಖೇಲ್ ರತ್ನ ಪ್ರಶಸ್ತಿ ಮರುನಾಮಕರಣ ದ್ವೇಷದ ರಾಜಕಾರಣ - ಡಿ.ಕೆ ಶಿವಕುಮಾರ್

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada