ಕನ್ನಡ ಹಿರಿಯ ಸಾಹಿತಿ, ನಾಡೋಜ ಪ್ರಶಸ್ತಿ ಪುರಸ್ಕೃತ ಕವಿ ಡಾ.ಚೆನ್ನವೀರ ಕಣವಿಯವರಿಗೆ ಕರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವಂತ ಧಾರವಾಡ ಜಿಲ್ಲಾಡಳಿತ, ನಾಡೋಜ ಡಾ.ಚೆನ್ನವೀರ ಕಣವಿಯವರಿಗೆ ಕರೋನಾ ಸೋಂಕು ತಗುಲಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಆಸ್ಪತ್ರೆಯ ಮಾಹಿತಿ ಪ್ರಕಾರ, ಚೆನ್ನವೀರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆರೋಗ್ಯ ಸ್ಥಿತವಾಗಿದೆ ತಿಳಿದುಬಂದಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಆಸ್ಪತ್ರೆಯ ಆಡಳಿತದೊಂದಿಗೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.