ಮಳೆಗಾಲದ ಅಧಿವೇಶನದಲ್ಲಿ (Monsoon session) ಸದನದಲ್ಲಿ ಮಾತನಾಡುವ ವೇಳೆ ಡಿಸಿಎಂ ಡಿಕೆ ಶಿವಕುಮಾರ್ (Dk Shivakumar ) ಆರ್.ಎಸ್.ಎಸ್ (RSS) ಪ್ರಾರ್ಥನಾ ಗೀತೆಯನ್ನು ಹಾಡಿದ್ದರು. ಇದು ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಟೀಕೆ ಮತ್ತು ವಿರೋಧಕ್ಕೆ ಕಾರಣವಾಗಿತ್ತು. ಹೀಗಾಗಿ ಡಿಕೆ ಶಿವಕುಮಾರ್ ನನ್ನ ನಡೆಯಿಂದ ಕಾರ್ಯಕರ್ತರಿಗೆ ನೋವಾಗಿದ್ದಲ್ಲಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದರು.

ಇದೀಗ ಗಣೇಶ ಹಬ್ಬದ ಸಂಭ್ರಮದ ಹಿನ್ನಲೆ ಡಿಸಿಎಂ ಡಿಕೆ ಶಿವಕುಮಾರ್, ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ನಾಡಿನ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯ ಕೋರಿದ್ದಾರೆ. ಶುಕ್ಲಾಂಬರದರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ.. ಯರ್ಮ್ಬ ಶ್ಲೋಕವನ್ನು ಪೋಸ್ಟ್ ಮಾಡಿದ್ದಾರೆ.

ವಿಘ್ನ ವಿನಾಶಕನಾದ ವಿನಾಯಕ ಎಲ್ಲರ ಜೀವನದಲ್ಲಿ ಸಂತಸ ಹಾಗೂ ಸಮೃದ್ಧಿಯನ್ನು ತರಲಿ ಎಂದು ಪ್ರಾರ್ಥಿಸುತ್ತೇನೆ. ಎಲ್ಲರಿಗೂ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಪೋಸ್ಟ್ ಮಾಡಿದ್ದಾರೆ. ಆದ್ರೆ ಕಾಂಗ್ರೆಸ್ ಹೈಕಮಾಂಡ್ ಗೆ ಹೆದರಿ ತಾವು ಕ್ಷಮೆ ಯಾಚಿಸಬೇಕಾಯಿತು ಎಂಬ ಜೆಡಿಎಸ್ ಮತ್ತು ಬಿಜೆಪಿ ಟೀಕೆಗಳಿಗೆ ಅವರು ಪ್ರತಿಕ್ರಿಯಿಸಿಲ್ಲ .












