ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಸಿಲ್ಚಾರ್ನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿನ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಕಳೆದ ರಾತ್ರಿ ಘರ್ಷನೆ ನಡೆದಿದೆ.
ಈ ಕಾಲೇಜಿನಲ್ಲಿ ಎಲೆಕ್ಟ್ರಿಕ್ ಇಂಜಿನಿಯರಿಂಗ್ ಕೋರ್ಸ್ನ ಮೂರನೇ ಸೆಮಿಸ್ಟರ್ನಲ್ಲಿದ್ದ ಅರುಣಾಚಲ ಪ್ರದೇಶದ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್ ಆಗಿದ್ದು, ಆತನ ಹಿಂದಿನ ಪತ್ರಿಕೆಗಳನ್ನು ಕ್ಲೀಯರ್ ಮಾಡಲು ಸಾಧ್ಯವಾಗದ ಕಾರಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮುಂದಿನ ಸೆಮಿಸ್ಟರ್ಗೆ ನೋಂದಾಯಿಸಲು ಅವಕಾಶ ನೀಡುವಂತೆ ಕಾಲೇಜು ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಅದನ್ನು ತಿರಸ್ಕರಿಸಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳು ನಿನ್ನೆ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ವಿದ್ಯಾರ್ಥಿಗಳು ರಿಜಿಸ್ಟ್ರಾರ್ ಅವರ ಅಧಿಕೃತ ನಿವಾಸವನ್ನು ಸುತ್ತುವರೆದಿದ್ದರಿಂದ ಕ್ಯಾಂಪಸ್ನಲ್ಲಿ ಉದ್ವಿಗ್ನತೆ ವಾತಾವರಣ ಉಂಟಾಯಿತು. ಇದಾದ ಬಳಿಕ ನಾವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಚದುರಿಸಲು ಸೌಮ್ಯವಾದ ಬಲಪ್ರಯೋಗವನ್ನು ಆಯ್ಕೆಮಾಡಿಕೊಳ್ಳಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ಆತ್ಮಹತ್ಯೆ ಕುರಿತಂತೆ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
⚡ASSAM SHOCKER : 3rd-Year-Student of NIT SILCHAR Commits Suicide; Students Launch Protest Against Administration.#NITSilchar #Silchar #Assam #Students #Suicide #ArunachalPradesh #educacion pic.twitter.com/TQoMxlUhs3
— TIKHNADRISHTI (@tikhnadrishti) September 15, 2023