ಮೈಸೂರು : ವಿದ್ಯೆ ಕಲಿಯಬೇಕೆಂದು ಸ್ವಂತ ಊರನ್ನು ಬಿಟ್ಟು ಹಾಸ್ಟೆಲ್ನಲ್ಲಿ ವಾಸ್ತವ್ಯ ಹೂಡಿರುವ ವಿದ್ಯಾರ್ಥಿಗಳಿಗೆ ಇದೀಗ ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮೈಸೂರಿನ ಪ್ರತಿಷ್ಠಿತ ಮಹಾರಾಜ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಈ ಸಂಕಷ್ಟ ಎದುರಾಗಿದೆ. ಕಲುಷಿತ ನೀರನ್ನೇ ಆಹಾರ ತಯಾರಿಕೆಗೆ ಇಲ್ಲಿನ ಅಡುಗೆ ಸಿಬ್ಬಂದಿ ಬಳಕೆ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಬಗ್ಗೆ ಈಗಾಗಲೇ ವಿದ್ಯಾರ್ಥಿಗಳು ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದರೂ ಸಹ ಅಧಿಕಾರಿಗಳು ಜಾಣ ಕಿವುಡುತನ ಪ್ರದರ್ಶಿಸುತ್ತಿದ್ದಾರೆ ಎನ್ನಲಾಗಿದೆ. ಇನ್ನಾದರೂ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳದೇ ಹೋದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ವಿದ್ಯಾರ್ಥಿಗಳು ನೀಡಿದ್ದಾರೆ.
ಇನ್ನು ಈ ವಿಚಾರ ಬೆಳಕಿಗೆ ಬರುತ್ತಿದ್ದಣತೆಯೇ ಮೈಸೂರು ವಿವಿ ಡೀನ್ ಚಂದ್ರಶೇಖರ್ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದಾರೆ. ಅಲ್ಲದೇ ಶೀಘ್ರದಲ್ಲಿಯೇ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಆಶ್ವಾಸನೆ ನೀಡಿದ್ದಾರೆ.