• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಂಜಾಬಿಗೆ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ನೂತನ ಸಿಎಂ – ಹೈಕಮಾಂಡ್ ಅಚ್ಚರಿಯ ಆಯ್ಕೆ

Any Mind by Any Mind
September 19, 2021
in ದೇಶ
0
ಪಂಜಾಬಿಗೆ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ನೂತನ ಸಿಎಂ – ಹೈಕಮಾಂಡ್ ಅಚ್ಚರಿಯ ಆಯ್ಕೆ
Share on WhatsAppShare on FacebookShare on Telegram

ಕಳೆದ ಕೆಲವು ದಿನಗಳಿಂದ ರಾಜಕೀಯ ಹೈಡ್ರಾಮಗಳಿಗೆ ಪಂಜಾಬ್‌ ಸಾಕ್ಷಿಯಾಗಿತ್ತು. ಆಡಳಿತರೂಢ ಕಾಂಗ್ರೆಸ್‌ನ ಒಳ ಜಗಳದ ಪರಿಣಾಮ ಮುಖ್ಯಮಂತ್ರಿ ಸ್ಥಾನದಿಂದ ಅಮರೀಂದರ್‌ ಸಿಂಗ್‌ ಕೆಳಗಿಳಿದಿದ್ದರು.

ADVERTISEMENT

ಅಮರೀಂದರ್‌ ತೆರವಿನಿಂದ ಖಾಲಿಯಾದ ಮುಖ್ಯಮಂತ್ರಿ ಪಟ್ಟಕ್ಕೆ ಕೊನೆಗೂ ಒಬ್ಬರನ್ನು ಹೈಕಮಾಂಡ್‌ ಆಯ್ಕೆ ಮಾಡಿದೆ. ಚರಣಜಿತ್ ಸಿಂಗ್ ಚನ್ನಿಯನ್ನುಪಂಜಾಬ್‌ ನೂತನ ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್‌ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣಜಿತ್ ಸಿಂಗ್ ಚನ್ನಿ ಆಯ್ಕೆಯಾಗಿದ್ದಾರೆ..

ಪಂಜಾಬ್: ಮುಖ್ಯಮಂತ್ರಿ ಸ್ಥಾನಕ್ಕೆ ʼಕ್ಯಾಪ್ಟನ್ ಅಮರೀಂದರ್ ಸಿಂಗ್ʼ ರಾಜೀನಾಮೆ

ಭಾರತದಲ್ಲಿಯೇ ಶೇಕಡಾವರು ಅತಿ ಹೆಚ್ಚು (ಪಂಜಾಬ್‌ನ ಶೇ.35) ದಲಿತರನ್ನು ಹೊಂದಿರುವ ಪಂಜಾಬ್ ರಾಜ್ಯದಲ್ಲಿ  ಇದೇ ಮೊದಲ ಬಾರಿ ದಲಿತ ಸಮುದಾಯಕ್ಕೆ ಸಿಎಂ ಪಟ್ಟ ಒಲಿದಿದೆ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿಯಾಗಿರುವ 58 ವರ್ಷದ ಚರಣಜಿತ್ ಸಿಂಗ್ ಚನ್ನಿ ಅಮರಿಂದರ್ ಸಿಂಗ್ ಸಂಪುಟದಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿದ್ದರು. ಅವರು ಚಮಕೌರ್ ಸಾಹಿಬ್ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ.

ಪಂಜಾಬ್ ಸಿಎಂ ರಾಜೀನಾಮೆ: ಹಳೆಯ ಬಿಕ್ಕಟ್ಟಿನ ಅಂತ್ಯವೋ? ಹೊಸ ಬಿಕ್ಕಟ್ಟಿನ ಆರಂಭವೋ?

2015 ರಿಂದ 2016 ರವರೆಗೆ ಪಂಜಾಬ್ ವಿಧಾನಸಭೆಯಲ್ಲಿ ಚನ್ನಿ ವಿರೋಧ ಪಕ್ಷದ ನಾಯಕರಾಗಿದ್ದರು. ಅವರನ್ನು ಮಾರ್ಚ್ 2017 ರಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸರ್ಕಾರದಲ್ಲಿ ಮಂತ್ರಿಯನ್ನಾಗಿ ಮಾಡಲಾಯಿತು.

Congratulations to Sri. #CharanjitSinghChanni for being elected the Leader of Congress Legislative Party in Punjab, my best wishes to him.

I am sure he will rise to the occasion & deliver good governance to the people of Punjab.@INCPunjab

— Mallikarjun Kharge (@kharge) September 19, 2021

“ಪಂಜಾಬಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಚರಣಜಿತ್ ಸಿಂಗ್ ಚನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ” ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ.

It gives me immense pleasure to announce that Sh. #CharanjitSinghChanni has been unanimously elected as the Leader of the Congress Legislature Party of Punjab.@INCIndia @RahulGandhi @INCPunjab pic.twitter.com/iboTOvavPd

— Harish Rawat (@harishrawatcmuk) September 19, 2021

ಅಮರೀಂದರ್‌ ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕ ಸುಖಜಿಂದರ್ ಸಿಂಗ್ ರಾಂಧವಾ ಸಿಎಂ ಹುದ್ದೆ ಏರಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಕೊನೆ ಕ್ಷಣಕ್ಕಾಗುವಾಗ ಹೈಕಮಾಂಡ್‌ ಅಚ್ಚರಿಯ ಘೋಷಣೆ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸುಖಜಿಂದರ್ ಸಿಂಗ್ ರಾಂಧವಾ, “ಇದು ಹೈಕಮಾಂಡ್ ನಿರ್ಧಾರ, ನಾನು ಅದನ್ನು ಸ್ವಾಗತಿಸುತ್ತೇನೆ. ಚನ್ನಿ ನನ್ನ ಕಿರಿಯ ಸಹೋದರನಂತೆ … ನನಗೆ ಯಾವುದೇ ನಿರಾಶೆ ಇಲ್ಲ” ಎಂದು ಹೇಳಿದ್ದಾರೆ.

It's high command's decision…, I welcome it. Channi is like my younger brother…I am not at all disappointed…: Congress leader Sukhjinder Singh Randhawa, after announcement of Charanjit Singh Channi as new Punjab Chief Minister pic.twitter.com/jHbAHapQEH

— ANI (@ANI) September 19, 2021
Tags: Charanjit Singh Channi to be Punjab chief ministerCongress Partyನರೇಂದ್ರ ಮೋದಿ
Previous Post

ಕೋವಿಡ್‌ ಲಸಿಕೆ ಅಡ್ಡಪರಿಣಾಮದ ವರದಿ ಪ್ರಕಟಿಸಲು ಮೀನಾಮೇಷ ಎಣಿಸುತ್ತಿರುವ ಸರ್ಕಾರ.!

Next Post

ಗಾಂಧಿಯನ್ನು ಕೊಂದವರಿಗೆ ನೀವ್ಯಾವ ಲೆಕ್ಕ? ಎಂದು ಸಿಎಂಗೆ ಬೆದರಿಕೆ ಹಾಕಿದ್ದ ಹಿಂದೂ ಮುಖಂಡನ ಬಂಧನ

Related Posts

Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
0

ಬಿಜೆಪಿಯವರಿಗೆ ಮುಜುಗರ ಆಗುವ ಯಾವುದೇ ಪ್ರಶ್ನೆಯನ್ನು ಕೇಳಬಾರದು, ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ? ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ...

Read moreDetails

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025

Dr. Sharan Prakash Patil: ಮಂಗಳವಾರ ಬೆಳಗ್ಗೆ ನೂತನ ತಂತ್ರಜ್ಞಾನದ ಲೋಕಾರ್ಪಣೆ..

July 14, 2025

Dr. Shivaraj Kumar: ಅನಾವರಣವಾಯಿತು ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ವಿಶೇಷ ಪೋಸ್ಟರ್. .

July 14, 2025
Next Post
ಗಾಂಧಿಯನ್ನು ಕೊಂದವರಿಗೆ ನೀವ್ಯಾವ ಲೆಕ್ಕ? ಎಂದು ಸಿಎಂಗೆ ಬೆದರಿಕೆ ಹಾಕಿದ್ದ ಹಿಂದೂ ಮುಖಂಡನ ಬಂಧನ

ಗಾಂಧಿಯನ್ನು ಕೊಂದವರಿಗೆ ನೀವ್ಯಾವ ಲೆಕ್ಕ? ಎಂದು ಸಿಎಂಗೆ ಬೆದರಿಕೆ ಹಾಕಿದ್ದ ಹಿಂದೂ ಮುಖಂಡನ ಬಂಧನ

Please login to join discussion

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada