• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೌಜನ್ಯಾ ಫೇಸ್‌ಬುಕ್ ಪೇಜ್ ನಲ್ಲಿ ಚಾರಿತ್ರ್ಯಹರಣ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
October 24, 2023
in Top Story, ಕರ್ನಾಟಕ
0
ಸೌಜನ್ಯಾ ಫೇಸ್‌ಬುಕ್ ಪೇಜ್ ನಲ್ಲಿ ಚಾರಿತ್ರ್ಯಹರಣ ಆರೋಪ
Share on WhatsAppShare on FacebookShare on Telegram

ಮಂಗಳೂರು: ಕುಮಾರಿ ಸೌಜನ್ಯಾ ಫೇಸ್‌ಬುಕ್ ಪೇಜ್ ನಲ್ಲಿ ಚಾರಿತ್ರ್ಯಹರಣ ಆರೋಪ – ಪೇಜ್ ರಾಧಿಕಾ ಕಾಸರಗೋಡು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ADVERTISEMENT

ಕುಮಾರಿ ಸೌಜನ್ಯಾ ಎಂಬ ಫೇಸ್‌ಬುಕ್ ಖಾತೆಯಿಂದ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹಗಳನ್ನು ಬರೆದು ಜೀವ ಬೆದರಿಕೆಯೊಡ್ಡಲಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಉಷಾ ಶಶಿಧರ ಶೆಟ್ಟಿ ಎಂಬವರು ದೂರು ನೀಡಿದ್ದು, ಅವರ ದೂರಿನ ಅನ್ವಯ ಕುಮಾರಿ ಸೌಜನ್ಯಾ ಎಂಬ ಫೇಸ್‌ಬುಕ್ ಪೇಜ್ ಅಡ್ಮಿನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

12 ವರ್ಷಗಳ ಹಿಂದೆ ನಡೆದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಾಳದ ಕುಮಾರಿ ಸೌಜನ್ಯಾ ಹತ್ಯೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ವಿಚಾರವಾಗಿ ಎರಡು ತಂಡಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕಳೆದ ಹಲವು ತಿಂಗಳಿನಿಂದ ಸಂಘರ್ಷ ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಹಲವು ಚರ್ಚೆ, ಆರೋಪ ಪ್ರತ್ಯಾರೋಪಗಳು ಜೋರಾಗಿರುವ ಮಧ್ಯೆ ಈ ಪ್ರಕರಣ ದಾಖಲಾಗಿದೆ.

ಉಷಾ ನೀಡಿದ ದೂರಿನಲ್ಲೇನಿದೆ?

ಕಳೆದ ದಿನಾಂಕ 16ರಂದು ಕುಮಾರಿ ಸೌಜನ್ಯಾ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಉಷಾ ಅವರ ವಿರುದ್ಧ ಅಸಭ್ಯ ಹಾಗೂ ಅಶ್ಲೀಲವಾಗಿ ಬರೆಯಲಾಗಿದೆ. ಉಷಾ ಅವರ ಮಗನ ಹುಟ್ಟಿನ ಬಗ್ಗೆ ಅನುಮಾನವಿದ್ದು, ಡಿಎನ್ಎ ಟೆಸ್ಟ್ ಮಾಡಿಸಬೇಕು ಎಂದೆಲ್ಲಾ ಅಸಭ್ಯವಾಗಿ ಬರೆಯಲಾಗಿದೆ. ಅದಲ್ಲದೆ ಇದನ್ನು ಬರೆದದ್ದು ಪ್ರಜ್ವಲ್ ಗೌಡ ಎಂಬುದಾಗಿ ಅವರು ದೂರಿದ್ದಾರೆ.

ಅದಲ್ಲದೆ ಅಕ್ಟೋಬರ್ 19 ರಂದು ರಾಧಿಕಾ ಕಾಸರಗೋಡು ಪೇಜಿನ ಅನಿತಾ ಶಾನ್ ಮೊಗ್ ಅವರು ಶುಭಕ್ಕನಿಗೆ ಇವತ್ತು ಶುಭ ವಿದಾಯ. ಮುಂದೆ ಇದೆ ಮಾರಿಹಬ್ಬ ಎಂದು ಮೆಸೇಜ್ ಮಾಡಿ ಬೆದರಿಕೆಯೊಡ್ಡಿದ್ದಾರೆ.

ಇಷ್ಟೇ ಅಲ್ಲದೆ ಅಕ್ಟೋಬರ್‌ 20 ರಂದು ಉಷಾ ಅವರ ಗಂಡನ ಮೊಬೈಲ್‌ಗೆ ಕರೆ ಮಾಡಿ, ಹೆಂಡತಿಯನ್ನು ಹದ್ದು ಬಸ್ಸಿನಲ್ಲಿಡು ಇಲ್ಲದಿದ್ದರೆ ಅವಳ ಫೇಸ್ ಬುಕ್ ನಲ್ಲಿ, ಬೇಕಾಬಿಟ್ಟಿ ಮೇಸೆಜ್ ಗಳನ್ನು ಹಾಕುತ್ತೇವೆ. ಅವಳ ಚಿತ್ರವನ್ನು ಹಾಕುತ್ತೇವೆ, ನಾವು ಅವಳನ್ನು ಬಿಡುವುದಿಲ್ಲ, ಅವಳು ಉಜಿರೆಯಲ್ಲಿ ಇರುವವಳು, ಅವಳನ್ನು ಕೊಲ್ಲಿಸುವ ವ್ಯವಸ್ಥೆ ನಮ್ಮಲ್ಲಿದೆ. ಬದುಕಬೇಕಾದರೆ ಮಹೇಶ್‌ ಶೆಟ್ಟಿ ಬಗ್ಗೆ ಮಾತನಾಡಬೇಡಿ ಎಂದು ಬೆದರಿಕೆಯೊಡ್ಡಿರುವುದಾಗಿ ಉಷಾ ಅವರು ಆರೋಪಿಸಿದ್ದಾರೆ.

ದೂರಿನ ಮೇರೆಗೆ ಪೊಲೀಸರು ಕುಮಾರಿ ಸೌಜನ್ಯಾ ಹೆಸರಿನ ಫೇಸ್‌ಬುಕ್ ಪೇಜ್‌ನ ಅಡ್ಮಿನ್, ರಾಧಿಕ ಕಾಸರಗೋಡು ಫೇಸ್‌ಬುಕ್ ಪೇಜ್‌ನ ಅನಿತಾ ಮತ್ತು ಬೆದರಿಕೆ ಕರೆ ಮಾಡಿದ ಮೊಬೈಲ್ ನಂಬರ್ ಬಳಕೆದಾರರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Tags: FacebookmangloreSowjanyaSowjanya case
Previous Post

BiggBoss ಮನೆಯಿಂದ ಸಂತೋಷ್ ಅರೆಸ್ಟ್‌..? ಮುಂದೇನು ಆಗಬಹುದು..?

Next Post

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೃದಯಾಘಾತ…..?

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೃದಯಾಘಾತ…..?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೃದಯಾಘಾತ.....?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada