ಸಮ್ಮಿಶ್ರ ಸರ್ಕಾರ ಬೀಳಿಸಿದವರ ಜೊತೆಯೇ ಹೆಚ್.ಡಿ ಕುಮಾರಸ್ವಾಮಿ ಮೈತ್ರಿ ಮಾಡಿಕೊಂಡಿದ್ದಾರೆ. ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತ ನೀಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಹೆಚ್.ಡಿ. ಕುಮಾರಸ್ವಾಮಿ ಅವರು ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ. ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್ಗಾಗಿ ಕಾದು ಕುಳಿತಿದ್ದರು, ಇದೀಗ ಗೋವಿಂದ ಎಂದು ಲೇವಡಿ ಮಾಡಿದರು.
ಸ್ಥಳೀಯರನ್ನು ಆಯ್ಕೆ ಮಂಡ್ಯ ಗೌಡಿಕೆಯನ್ನು ಬೇರೆಯವರಿಗೆ ಕೊಟ್ಟಿಲ್ಲ. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.
ಹೆಚ್.ಡಿ.ಕುಮಾರಸ್ವಾಮಿ ಹಾಸನದಿಂದ ರಾಮನಗರಕ್ಕೆ ಬಂದಿದ್ದರು. ಇದೀಗ ಮಂಡ್ಯಕ್ಕೆ ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು, ಮಾಡಲಿ. ಬೆಂಗಳೂರು ಗ್ರಾಮಾಂತರದಲ್ಲಿ ಭಾವನನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ. ಎಲ್ಲಾ ಕಡೆ ನೀವೇ ನಿಂತರೆ ಕಾರ್ಯಕರ್ತರು ಏನು ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಅವರು ಪ್ರಶ್ನಿಸಿದರು.