ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th Februvary) ಹುಬ್ಬಳ್ಳಿ ತಾಲೂಕಿನ ಶಿರಗುಪ್ಪದಲ್ಲಿ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ನವಲಗುಂದ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎನ್ ಎಚ್ ಕೋನರಡ್ಡಿ ಅವರೊಂದಿಗೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ವೇದಿಕೆ, ಗಣ್ಯರ ಆಗಮನ ಮತ್ತು ನಿರ್ಗಮನ, ವಾಹನಗಳ ನಿಲುಗಡೆಗೆ ಮಾಡಲಾಗಿರುವ ಕ್ರಮಗಳ ಪರಾಮರ್ಶೆ ನಡೆಸಿದರು.


ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹಮದ್, ಜಿಲ್ಲಾಧಿಕಾರಿ ಶ್ರೀ ಭುವನೇಶ್ ಪಾಟೀಲ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ ಡಿ., ಪೊಲೀಸ್ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಉಪಸ್ಥಿತರಿದ್ದರು.






