ಇತ್ತೀಚೆಗೆ ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಅಪಘಾತದ ಪ್ರಕರಣಗಳು ತುಸು ಹೆಚ್ಚಾಗಿ ಕಂಡು ಬರುತ್ತಿದೆ. ಇದೀಗ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿಯಾಗಿದ್ದು, ಅಪಘಾತದ ತೀವ್ರತೆಗೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ.
ಇನ್ನು ಈ ಘಟನೆಯಿಂದಾಗಿ ಸೇತುವೆಯ ಕೆಳಗೂ ಅಪಘಾತಗಳು ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು ಆ ಬಗ್ಗೆ ಯಾವುದೇ ಆಧಿಕೃತ ಮಾಹಿತಿಯನ್ನ ಪೊಲೀಸ್ ಇಲಾಖೆ ನೀಡಿಲ್ಲ., ಸದ್ಯ ಲೋನಾವಾಲಾ ನಗರದಿಂದ ವಾಹನ ಸಂಚಾರವನ್ನು ಬದಲಿಸಲಾಗಿದ್ದು ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಇನ್ನು ಈ ದುರ್ಘಟನೆಯಿಂದ ಎಕ್ಸ್ಪ್ರೆಸ್ವೇಯಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಚರಣೆಗೆ ವೇಗವನ್ನ ನೀಡಲಾಗಿದೆ.
ಈಗ ಸದ್ಯದ ಮಟ್ಟಿಗೆ ಪೊಲೀಸರು ಮತ್ತು ತುರ್ತು ಸೇವೆಯ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಒಟ್ಟಾರೆಯಾಗಿ, ಈ ಅಪಘಾತದಲ್ಲಿ ಇದುವರೆಗೆ ಒಟ್ಟು 4 ಜನ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಂಬ ಮಾಹಿತಿ ಲಭ್ಯವಾಗಿದೆ