ಚೇತನ್ ಅಹಿಂಸಾರ ವೀಸಾ ರದ್ದತಿಗೆ ನಟ ಕಿಶೋರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸುವುದು ಬಿಟ್ಟು, ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗಬಾರದು ಎಂದು ನಟ ಕಿಶೋರ್ ಹೇಳಿದ್ದಾರೆ.
‘ಹಿಂದುತ್ವ’ ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ
ಆದರೆ ‘ಹಿಂದುತ್ವ’ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೆ.
ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ??
ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?
ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?
ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು??
https://www.instagram.com/p/CrI13sCvjMq/?igshid=MDJmNzVkMjY%3D