ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮುಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೆಸರನ್ನು ಶಿಫಾರಸು ಮಾಡಿದ್ದಾರೆ.
ನವೆಂಬರ್ ೮ರಂದು ನಿವೃತ್ತರಾಗಲಿರುವ ಯುಯು ಲಲಿತ್ ಮುಂದಿನ ನ್ಯಾಯಮೂರ್ತಿ ಸ್ಥಾನಕ್ಕೆ ಯಾರಗಬೇಕು ಎಂಬುದು ಶಿಫಾರಸು ಮಾಡಿದ್ದಾರೆ.
ಅಪರೂಪದ ಬೆಳವಣಿಗೆಯಲ್ಲಿ ಕೇಂದ್ರ ಕಾನೂನು ಸಚಿವರು ಮುಂದಿನ ಮುಖ್ಯ ನ್ಯಾಯಮೂರ್ತಿ ಯಾರಗಬೇಕು ಎಂದು ಶಿಫಾರಸು ಮಾಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಈ ಬಗ್ಗೆ ಸ್ವತಃ ಕಾನೂನು ಸಚಿವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಸುಪ್ರೀಂಕೋರ್ಟ್ ಕೊಲೆಜಿಯಂ ಸಭೆ ನಡೆಯುವ ಕುರಿತು ಗೊಂದಲ ಏರ್ಪಟ್ಟಿದ್ದು, ಸದ್ಯಕ್ಕೆ ಗೊಂದಲ ಬಗೆಹರಿಯವ ಸಾಧ್ಯತೆ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ ಎಂದು ಮೂಲಗಳು ವಿಶ್ಲೇಷಿಸಿವೆ.
ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಯುಯು ಲಲಿತ್ ಅವರ ಹೆಸರನ್ನು ಶಿಫಾರಸು ಮಾಡಿದ್ದರು. 74 ದಿನಗಳ ಅಲ್ಪಕಾಲದ ಮುಖ್ಯ ನ್ಯಾಯಮೂರ್ತಿ ಸ್ಥಾನ ಅಲಂಕರಿಸಿದ್ದ ಯುಯು ಲಲಿತ್ ಮುಂದಿನ ತಿಂಗಳು ನಿವೃತ್ತರಾಗಲಿದ್ದಾರೆ.