• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ

Any Mind by Any Mind
June 6, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ
Share on WhatsAppShare on FacebookShare on Telegram

ಮೀಸಲಾತಿ ಹೆಚ್ಚಳ : ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಬಿಜೆಪಿ-ಆರ್ ಎಸ್ ಎಸ್ ತಮ್ಮ ಹುಟ್ಟಿನಿಂದಲೇ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ವಿರೋಧಿಗಳು

ಮೀಸಲಾತಿ ವಿಚಾರದಲ್ಲಿ ಗಿಮಿಕ್, ಹುಡುಗಾಟ ಆಡಿದ್ದ ಬಿಜೆಪಿ ಯನ್ನು ನಾಡಿನ ಜನತೆ ಮತ್ತು ಅಹಿಂದ ಸಮುದಾಯಗಳು ಸಾರಾಸಗಟಾಗಿ ತಿರಸ್ಕರಿಸಿವೆ

ಬೆಂಗಳೂರು;ಜೂನ್‌.6 : ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು.

ಇಂದು ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಗಳ ಮಠಾಧೀಶರ ಒಕ್ಕೂಟದ ನಿಯೋಗದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು,ಹಿಂದಿನ ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿದೆ. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನ ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ.

ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ. ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇದರ ಕುರಿತು ನಾವು ಎಚ್ಚರದಿಂದಿರಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.


ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಕರ್ನಾಟಕದಲ್ಲಿ ಜನ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಜನರು ಬದಲಾವಣೆ ಬಯಸಿದ್ದಾರೆ. ಹಿಂದಿನ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು.


ಜಾತಿವಾರು ಸಮೀಕ್ಷೆ ವರದಿ ಸ್ವೀಕಾರ : ಐತಿಹಾಸಿಕ ಕಾರಣಗಳಿಂದಾಗಿ ಶತ ಶತಮಾನಗಳಿಂದ ಅವಕಾಶ ವಂಚಿತರಿಗೆ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ತಿಳಿಸಿದರು.

ಸರ್ಕಾರ ಎಲ್ಲ ವರ್ಗಗಳ ಬಡವರ ಪರ ; ನಮ್ಮ ಸರ್ಕಾರ ಎಲ್ಲ ವರ್ಗದವರ ಪರವಾಗಿದೆ. ಹಿಂದೆ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕವೆಚ್ಚವಾಗಲಿದೆ ಎಂದು ತಿಳಿಸಿದರು.

Tags: BJP GovernmentcmofkarnatakacmsiddaramiahDCM DK ShivakumaremploymentScheduled Castesscheduled tribessiddaramaiahSiddaramiah
Previous Post

5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ

Next Post

ಎಸ್. ಆರ್. ಬೊಮ್ಮಾಯಿ ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆ ಮಾಡಿ ಯಶಸ್ವಿಯಾದರು : ಬಿ.ಎಸ್. ಯಡಿಯೂರಪ್ಪ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಎಸ್. ಆರ್. ಬೊಮ್ಮಾಯಿ ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆ ಮಾಡಿ ಯಶಸ್ವಿಯಾದರು : ಬಿ.ಎಸ್. ಯಡಿಯೂರಪ್ಪ

ಎಸ್. ಆರ್. ಬೊಮ್ಮಾಯಿ ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆ ಮಾಡಿ ಯಶಸ್ವಿಯಾದರು : ಬಿ.ಎಸ್. ಯಡಿಯೂರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada