• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಚುನಾವಣೆಯ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 14, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರಿನ ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಸೋಮವಾರ (ಆಗಸ್ಟ್‌ 14) ಆಯೋಜಿಸಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಪಕ್ಷ ಹೆಚ್ಚು ಮತಗಳನ್ನು ಗಳಿಸಲು ನೆರವಾದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ADVERTISEMENT

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರಿನ ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಸೋಮವಾರ (ಆಗಸ್ಟ್‌ 14) ಆಯೋಜಿಸಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರು ಉದ್ಘಾಟಿಸಿದರು

ಸಭೆ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ಕಡೆ ಆರ್‌ಎಸ್‌ಎಸ್ ಗುಪ್ತ ಕಾರ್ಯಸೂಚಿ ಜಾರಿಗೊಳಿಸುತ್ತಾ ಮತ್ತೊಂದು ಕಡೆ ಬೆಲೆ ಏರಿಕೆ, ಹಣದುಬ್ಬರ, ಭ್ರಷ್ಟಾಚಾರ, ದುರಾಡಳಿತದಿಂದ ನಾಡಿನ, ದೇಶದ ಜನತೆಯನ್ನು ವಿಪರೀತ ಸಂಕಷ್ಟಕ್ಕೆ ಸಿಲುಕಿಸಿದ್ದರು. ನಾಡಿನ ಜನ ಈ ಎಲ್ಲಾ ದುಷ್ಟಾಚಾರವನ್ನು ಸಮರ್ಥವಾಗಿ ಧಿಕ್ಕರಿಸಿ ಸೋಲಿಸಿದ್ದಾರೆ ಎಂದು ಬಿಜೆಪಿಯನ್ನು ತಿವಿದರು.

ಮನುಸ್ಮೃತಿಯ ಜಾತಿ ಆಧಾರಿತ ಶೋಷಿತ ನ್ಯಾಯಪದ್ಧತಿಯನ್ನು ಜಾರಿಗೆ ತರುವ ಮನಸ್ಥಿತಿಯವರು ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸುತ್ತಾ ಸಂವಿಧಾನವನ್ನು ಮುಗಿಸಲು ಯತ್ನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸಂವಿಧಾನ ಬದಲಾವಣೆ ಆದರೆ ದೇಶದ ಶೇ 90 ಕ್ಕೂ ಹೆಚ್ಚು ಸಂಖ್ಯೆಯ ಜನರ ದುಡಿಯುವ ಮತ್ತು ಬದುಕಿನ ಅವಕಾಶಗಳು ನಾಶವಾಗುತ್ತದೆ. ಆದ್ದರಿಂದ ಸಂವಿಧಾನವನ್ನು ಉಳಿಸಿ ದೇಶದ ದುಡಿಯುವ ಜನ ವರ್ಗಗಳ ಬದುಕಿನ ಅವಕಾಶಗಳನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ದೇಶದ ಜನರ ಮೇಲಿದೆ. ಕಾಂಗ್ರೆಸ್ಗೆ ನಾಡಿನ ಮತ್ತು ದೇಶದ ದುಡಿಯುವ ವರ್ಗಗಳು ಈ ಜವಾಬ್ದಾರಿಯನ್ನು ನೀಡಿದ್ದಾರೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ಜನರ ಜೇಬಿನಲ್ಲಿರುವ ಹಣವನ್ನು ಕಿತ್ತು ಸಾವಿರಾರು ಕೋಟಿ ಒಡೆಯರಾಗಿರುವ ಶ್ರೀಮಂತರಿಗೆ ನೀಡುವುದು ಅವರ ಆರ್ಥಿಕತೆ. ನಮ್ಮ ರಾಜ್ಯಕ್ಕೆ ಬರಬೇಕಾದ ತೆರಿಗೆ ಮತ್ತು ಆರ್ಥಿಕತೆಯ ನೆರವನ್ನೂ ನೀಡದೆ ಇಡೀ ನಾಡಿನ ಜನತೆಗೆ ಬಿಜೆಪಿ ವಂಚಿಸಿದೆ. ಆದರೆ, ನಾವು ಜನರ ಜೇಬಿನಲ್ಲಿ ಹಣ ಉಳಿಯುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ. ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವ ಆಯವ್ಯಯವನ್ನು ನಾವು ಮಂಡಿಸಿದ್ದೇವೆ. ಕರ್ನಾಟಕ ಮಾದರಿಯ ಈ ಅಭಿವೃದ್ಧಿಯನ್ನು ದೇಶದ ಎಲ್ಲಾ ರಾಜ್ಯಗಳೂ ಅಧ್ಯಯನ ನಡೆಸಿ ಅಳವಡಿಸಿಕೊಳ್ಳಲು ಮುಂದಾಗಿವೆ. ಇದು ಕರ್ನಾಟಕದ ಜನತೆಗೆ ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷ ನೀಡಿರುವ ಅಭಿವೃದ್ಧಿಯ ಕೊಡುಗೆ ಎಂದು ಸಂತಸ ಸರ್ಕಾರದ ಸಾಧನೆ ಕುರಿತು ಹೇಳಿದರು.

ರಾಜ್ಯದ ಜನರ ಹಸಿವು ನೀಗಿಸಲು ಅಕ್ಕಿ ಕೊಡಿ ಎಂದರೆ ಕೊಡಲು ಒಪ್ಪದ ಬಿಜೆಪಿಯವರು ಈಗ ಆ ಸಾವಿರಾರು ಟನ್ ಅಕ್ಕಿ ಹಾಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಕೈಯಲ್ಲಿರುವ ಅಕ್ಕಿಗೆ ಹುಳು ಹಿಡಿಯುತ್ತಿದೆ. ಜನರು ಉಪವಾಸ ಇದ್ದರೂ ಪರವಾಗಿಲ್ಲ, ಅಕ್ಕಿ ಹಾಳಾದರೂ ಪರವಾಗಿಲ್ಲ ಆದರೆ ಹಸಿದವರಿಗೆ ಅಕ್ಕಿ ಕೊಡಬಾರದು ಎನ್ನುವುದು ಬಿಜೆಪಿಯ ಅತ್ಯಂತ ಅನಾಗರಿಕ ಮತ್ತು ಅಮಾನವೀಯ ಮನಸ್ಥಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ನಟ ಉಪೇಂದ್ರ ವಿರುದ್ಧ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಕಿಡಿ

“ವಿಧಾನಸಭಾ ಚುನಾವಣೆ ಬಳಿಕ ನಮ್ಮ ಕಾರ್ಯಕರ್ತರು ರಿಲಾಕ್ಸ್ ಆಗಬಾರದು. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲುತ್ತೇವೆ ಎಂದು ಹೈಕಮಾಂಡ್ಗೆ ಭರವಸೆ ನೀಡಿದ್ದೇನೆ. ಇದಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ” ಎಂದು ಭರವಸೆ ವ್ಯಕ್ತಪಡಿಸಿದರು.

“2024 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸೋಲುತ್ತದೆ. ಈ ಪ್ರಧಾನಿ ಮೋದಿ ಸಂಸತ್ತಿಗೆ ಸರಿಯಾಗಿ ಹೋಗುವುದಿಲ್ಲ, ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದಿಲ್ಲ. ಕೇವಲ ಮನ್ ಕಿ ಬಾತ್‌ನಲ್ಲಿ ದೇಶದ ಜನ ಇರುವುದಿಲ್ಲ” ಎಂದು ಕುಟುಕಿದರು.

Tags: BJPCM SiddaramaiahKarnataka Assembly electionsKPCCಕರ್ನಾಟಕ ವಿಧಾನಸಭೆ ಚುನಾವಣೆಕಾಂಗ್ರೆಸ್‌ಕೆಪಿಸಿಸಿಬಿಜೆಇಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ರದ್ದು: ಸಿಎಂ ಸಿದ್ದರಾಮಯ್ಯ

Next Post

ತನ್ನ ಕಾಲಿನ ಮೇಲೆ ತಾನೇ ಕಲ್ಲು ಹಾಕಿಕೊಂಡ್ರಾ ರಿಯಲ್​ ಸ್ಟಾರ್​ ಉಪೇಂದ್ರ..? ಕೋರ್ಟ್​ ತಡೆ ಯಾಕೆ..?

Related Posts

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
0

ಉಡುಪಿ: ವಿದ್ಯಾರ್ಥಿಗಳ ಜನಿವಾರ ತೆಗೆಯುವಂತೆ ಒತ್ತಾಯಿಸಿ ಕಾರಣವಿಲ್ಲದೇ ಮನಸೋ ಇಚ್ಛೆ ಬಸ್ಕಿ ಹೊಡೆಸಿರುವ ಶಿಕ್ಷಕನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಕಾರ್ಕಳದ ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ...

Read moreDetails
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

November 19, 2025
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

November 19, 2025
Next Post
ತನ್ನ ಕಾಲಿನ ಮೇಲೆ ತಾನೇ ಕಲ್ಲು ಹಾಕಿಕೊಂಡ್ರಾ ರಿಯಲ್​ ಸ್ಟಾರ್​ ಉಪೇಂದ್ರ..? ಕೋರ್ಟ್​ ತಡೆ ಯಾಕೆ..?

ತನ್ನ ಕಾಲಿನ ಮೇಲೆ ತಾನೇ ಕಲ್ಲು ಹಾಕಿಕೊಂಡ್ರಾ ರಿಯಲ್​ ಸ್ಟಾರ್​ ಉಪೇಂದ್ರ..? ಕೋರ್ಟ್​ ತಡೆ ಯಾಕೆ..?

Please login to join discussion

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ
Top Story

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

by ಪ್ರತಿಧ್ವನಿ
November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ
Top Story

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!