• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋಮುವಾದ ಹೆಸರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ: ಎಚ್‌.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
October 1, 2023
in Top Story, ಕರ್ನಾಟಕ
0
ಕೋಮುವಾದ ಹೆಸರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ: ಎಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ಜಾತ್ಯತೀತ, ಕೋಮುವಾದ ಹೆಸರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ. ಅವರೊಬ್ಬ ಛದ್ಮವೇಷಧಾರಿ, ಡೋಂಗಿ ಸಮಾಜವಾದಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ADVERTISEMENT

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಜಾತ್ಯಾತೀತತೆಯ ಬಗ್ಗೆ ಪ್ರಶ್ನಿಸಿದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ. ‘ ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯ ಅವರೇ? ಎಂದು ಪ್ರಶ್ನಿಸಿದ್ದಾರೆ.

ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್’ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ? ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ? 2006ರಲ್ಲಿ ಬಿಜೆಪಿ ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್’ ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ. ಮರೆತಿರಾ ಛದ್ಮವೇಷಧಾರಿ??

Tags: BangaloreHD KumaraswamyJDSKarnatakaNews
Previous Post

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ

Next Post

ಪರಿಪೂರ್ಣತೆಯೆಡೆಗೆ ಪಯಣ..!

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
Next Post
ಪರಿಪೂರ್ಣತೆಯೆಡೆಗೆ ಪಯಣ..!

ಪರಿಪೂರ್ಣತೆಯೆಡೆಗೆ ಪಯಣ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada