• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಮನೆಗೊಂದು ಗ್ರಂಥಾಲಯ’ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
January 13, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಯಾದ ‘ಮನೆಗೊಂದು ಗ್ರಂಥಾಲಯ’ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಸಂಪುಟಗಳನ್ನು ಲೋಕಾರ್ಪಣೆಗೊಳಿಸಿದರು.

ADVERTISEMENT

‘ಮನೆಗೊಂದು ಗ್ರಂಥಾಲಯ’ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸುತ್ತಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂ ಪ ನಾಗರಾಜಯ್ಯ ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಗ್ರಂಥಾಲಯ ಫಲಕವನ್ನು ಅನಾವರಣಗೊಳಿಸಿದರು.

ಮನೆಗೊಂದು ಗ್ರಂಥಾಲಯ
ಈ ಯೋಜನೆಯು ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಯೋಜನೆಯಡಿ ರಾಜ್ಯದಾದ್ಯಂತ ಪ್ರಸಕ್ತ ಸಮಿತಿಯ ಅವಧಿಯಲ್ಲಿ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ.
ಪುಸ್ತಕಾಭಿರುಚಿಯನ್ನು ಇಂದಿನ ಯುವಪೀಳಿಗೆಯಲ್ಲಿ ಬೆಳೆಸುವುದು ಇದರ ಮುಖ್ಯ ಉದ್ದೇಶ.

ಮರೆಯಾಗುತ್ತಿರುವ ಪುಸ್ತಕ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿಯೂ ಒಂದು ಪುಟ್ಟ ಗ್ರಂಥಾಲಯ ಕಟ್ಟುವುದು ಈ ಯೋಜನೆಯ ಕನಸು.

ಪ್ರಾಧಿಕಾರ ತಮ್ಮ ಮನೆಗಳಲ್ಲಿ ಗ್ರಂಥಾಲಯ ಆರಂಭಿಸುವ ಇಚ್ಛೆ ಉಳ್ಳವರನ್ನು ಸಂಪರ್ಕಿಸಿ ಆ ಭಾಗದ ಸಾಹಿತಿ ಬರಹಗಾರರನ್ನು ಅವರ ಮನೆಗೆ ಕರೆದೊಯ್ದು, ಅಲ್ಲೊಂದು ಕಾರ್ಯಕ್ರಮವನ್ನು ಆಯೋಜಿಸಿ ಪ್ರಾಧಿಕಾರದ ಪರವಾಗಿ ಅವರಿಗೊಂದು ಪ್ರಮಾಣ ಪತ್ರ ನೀಡಲಾಗುತ್ತದೆ.

ಈ ಯೋಜನೆಯ ಪ್ರಮುಖ ಅಂಶಗಳು ಕೆಳಕಂಡಂತಿದೆ

ಮನೆ ಮನೆಯಲ್ಲಿ, ಸಂಘ ಸಂಸ್ಥೆಗಳಲ್ಲಿ ಕಚೇರಿಗಳಲ್ಲಿ ಗ್ರಂಥಾಲಯ ಸ್ಥಾಪನೆ. ಮನೆಯ ಒಡೆಯರು 100 ಪುಸ್ತಗಳಿಂದ ಆರಂಭಿಸಿ ಗ್ರಂಥಾಲಯವನ್ನು ಸ್ಥಾಪನೆ ಮಾಡಬೇಕು. ಪುಸ್ತಕಗಳ ಖರೀದಿ ಹಾಗೂ ಅವುಗಳನ್ನು ಸುಸಜ್ಜಿತವಾಗಿ ಇಡುವ ಜವಾಬ್ದಾರಿ ಮನೆಯ ಒಡೆಯರದು. ಸದರಿ ಗ್ರಂಥಾಲಯವನ್ನು ಗಣ್ಯರಿಂದ/ ವಿದ್ವಾಂಸರುಗಳಿಂದ / ಕಲಾವಿದರುಗಳಿಂದ ಉದ್ಘಾಟನೆಯನ್ನು ಮಾಡಿಸುವ ಜವಾಬ್ದಾರಿ ಪ್ರಾಧಿಕಾರದ್ದು.

ಪ್ರಚಾರದ ಜವಾಬ್ದಾರಿ ಪ್ರಾಧಿಕಾರದ್ದು

ತಾಲ್ಲೂಕು / ಜಿಲ್ಲಾ ಮಟ್ಟದಲ್ಲಿ ಗ್ರಂಥಾಲಯ ಜಾಗೃತ ಸಮಿತಿ ರಚನೆ. ಗ್ರಂಥಾಲಯ ಸ್ಥಾಪಿಸಲು ಪ್ರೋತ್ಸಾಹ ನೀಡುವುದು, ಅದರ ಜೊತೆ ನಿಕಟ ಸಂಪರ್ಕ
ಸಮಿತಿಯ ಜವಾಬ್ದಾರಿ.

ಕುಮಾರವ್ಯಾಸಭಾರತ ಕೃತಿ ಲೋಕಾರ್ಪಣೆ
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಕೃತಿಯ ಸಂಪುಟಗಳನ್ನು ಲೋಕಾರ್ಪಣೆ ಮಾಡಿದರು.

ಆಡು ಭಾಷೆಯಲ್ಲಿ ಮಹಾ ಕಾವ್ಯ ಕಟ್ಟಿಕೊಟ್ಟ ಹಿರಿಮೆ ಗದುಗಿನ ನಾರಾಣಪ್ಪ ಅವರದ್ದು. ಕುಮಾರವ್ಯಾಸ ಎಂದೇ ಪ್ರಖ್ಯಾತರಾದ ಗದುಗಿನ ನಾರಾಣಪ್ಪ ರಚಿಸಿದ ಕರ್ಣಾಟಭಾರತಕಥಾಮಂಜರಿ’ ಕುಮಾರವ್ಯಾಸಭಾರತ ಎಂದೇ ಪ್ರಖ್ಯಾತವಾಗಿದೆ.

ಕನ್ನಡ ಸಾಹಿತ್ಯ ಲೋಕದ ಅಜರಾಮರ ಕೃತಿಯಾದ ಕುಮಾರವ್ಯಾಸಭಾರತವನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಓದುಗರಿಗೆ ಒದಗಿಸಲಾಗುವುದೆಂದು ಸುವರ್ಣ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಕಳೆದ ವರ್ಷ ಗದಗಿನಲ್ಲಿ ಆಚರಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರು ಘೋಷಿಸಿದ್ದರು. ಅದರಂತೆ ಕನ್ನಡ ಗಣಕ ಪರಿಷತ್ತು ಈ ಹಿಂದೆ ಪ್ರಕಟಿಸಿದ್ದ ಕುಮಾರವ್ಯಾಸಭಾರತದ ಕೃತಿಯ ಹಕ್ಕುಗಳನ್ನು ಪುಸ್ತಕ ಪ್ರಾಧಿಕಾರ ಪಡೆದುಕೊಂಡು ಈ ಕೃತಿಯನ್ನು ಪ್ರಕಟಿಸಿದೆ. ಕನ್ನಡ ಪುಸ್ತಕ ಪ್ರಾಧಿಕಾರ ಈ ಕುಮಾರವ್ಯಾಸಭಾರತವನ್ನು ಎರಡು ಸಂಪುಟಗಳಲ್ಲಿ ಪ್ರಕಟಿಸಿದೆ. ಈ ಎರಡೂ ಸಂಪುಟಗಳು
ಸೇರಿ ಒಟ್ಟು ರೂ.500-00ಗಳ ಬೆಲೆ ನಿಗದಿಪಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ, ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಇಲಾಖೆ ನಿರ್ದೇಶಕರಾದ ಡಾ. ಧರಣೀದೇವಿ ಮಾಲಗತ್ತಿ ಹಾಗೂ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ, ಕನ್ನಡ ಸಾಹಿತ್ಯ ಅಧ್ಯಕ್ಷರಾದ ಡಾ. ಮಹೇಶ್ ಜೋಶಿ, ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕಿರಣ್ ಸಿಂಗ್ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Tags: BJPCongress PartyDr DharanideviDr N ManjulaKannada BookKiran SinghMahesh JoshiMalagattiManasaManegondu Grantalayasiddaramaiahಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂಸದ ಡಾ.ಮಂಜುನಾಥ್‌ಗೆ ಮದುವೆ ಆಮಂತ್ರಣ ನೀಡಿದ ಡಾಲಿ..

Next Post

ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್ .”

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post

ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್ ."

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!