ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್ ಸೇರಿದಂತೆ ವಿವಿಧ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು.
![](https://pratidhvani.com/wp-content/uploads/2024/01/WhatsApp-Image-2024-01-16-at-12.00.38-jpeg.webp)
ಪ್ರಮುಖವಾಗಿ ಪೊಲೀಸ್ ಐಟಿ-V2, ITPA ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, (police) CG ನೋಂದಣಿ ಪೋರ್ಟಲ್, (Karnataka) ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು.
![](https://pratidhvani.com/wp-content/uploads/2024/01/WhatsApp-Image-2024-01-16-at-12.00.36.jpeg)
ಇದೇ ವೇಳೆ ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನ ದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.
![](https://pratidhvani.com/wp-content/uploads/2024/01/WhatsApp-Image-2024-01-16-at-12.00.37.jpeg)
ಗೃಹ ಸಚಿವ ಡಾ. ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಹಾಜರಿದ್ದರು.