ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದಿನಿಂದ(ಮಾ.5) ಮೂರು ದಿನಗಳ ಕಾಲ ಧಾರವಾಡ(Dharwad), ಉತ್ತರ ಕನ್ನಡ(Uttara Kannada), ಬೆಳಗಾವಿ(Belagavi) ಹಾಗೂ ಬೀದರ್(Bidar) ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಇಂದು ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ(Hubli) ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು ಅಲ್ಲಿಂದ ಹೆಲಿಕಾಫ್ಟರ್ ಮೂಲಕ ಉತ್ತರ ಕನ್ನಡ ಜಿಲ್ಲೆ ಶಿರಸಿ(Sirsi) ತಾಲೂಕಿನ ಬನವಾಸಿಗೆ ತೆರಳಲಿದ್ದು, ಸಂಜೆ 6ಕ್ಕೆ ಬನವಾಸಿಯಲ್ಲಿ ನಡೆಯುವ ಕದಂಬೋತ್ಸವ-2024 ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಇಂದು ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿರಸಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಮಾ.6ರ ಬುಧವಾರದಂದು ಶಿರಸಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಯ ಅಥಣಿ ತಾಲೂಕಿಗೆ ತೆರಳಲಿರುವ ಅವರು ಬೆ.11ಕ್ಕೆ ನಡೆಯುವ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಏತ ನೀರಾವರಿ ಯೋಜನೆ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧಾಹ್ನ 2ಕ್ಕೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ಕೃಷಿ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ರಾತ್ರಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಮಾ.7ರ ಗುರುವಾರ ಬೀದರ್ ಜಿಲ್ಲೆಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಅವರು, ಬೀದರ್‌ನ ಬಸವ ಕಲ್ಯಾಣದಲ್ಲಿ ಆಯೋಜಿಸಿರುವ ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಏರ್ಪಡಿಸಿರುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
#Siddaramaiah #CMofKarnataka #TourProgramme #Congress











