• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತಂದ ಮುಖ್ಯಮಂತ್ರಿಗಳು ನಾಡಿನ ಕ್ಷಮೆ ಕೇಳಬೇಕು – ವಿಜಯೇಂದ್ರ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
September 25, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರದಲ್ಲಿ ಎಸ್.ಐ.ಟಿ. ರಚಿಸಲು ಮುಖ್ಯಮಂತ್ರಿಗಳಿಗೆ ಒತ್ತಡ ಹಾಕಿದವರು ಯಾರು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ತಂದ ಮುಖ್ಯಮಂತ್ರಿಗಳು ಈ ನಾಡಿನ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT


ಬಿಜೆಪಿ ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರ ಜೊತೆ ಇಂದು ಬೆಂಗಳೂರಿನ ಜೆ.ಪಿ. ನಗರದ, ರಾಗಿಗುಡ್ಡ ಬಳಿಯ ವಾರ್ಡ್ ನಂ.177, ಬೂತ್ ನಂ.155 ರ ಅಧ್ಯಕ್ಷ ಬಿ. ರವಿ ಅವರ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಿ.ವೈ ವಿಜಯೇಂದ್ರ ಅವರು ಮಾಧ್ಯಮಗಳ ಜೊತೆ ಮಾತನಾಡಿದÀರು. ಯಾವ ಅಯೋಗ್ಯರ ಮಾತಿನನ್ವಯ ಮುಖ್ಯಮಂತ್ರಿಗಳು ಇಂಥ ದೊಡ್ಡ ನಿರ್ಧಾರ ಪ್ರಕಟಿಸಿದರು? ಎಸ್‍ಐಟಿ ರಚನೆ ಆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಎಷ್ಟು ಅಪಪ್ರಚಾರ ನಡೆದಿದೆ? ಇದಕ್ಕೆ ರಾಜ್ಯದ ಮುಖ್ಯಮಂತ್ರಿಗಳೇ ಉತ್ತರ ನೀಡಬೇಕೆಂದು ಆಗ್ರಹಿಸಿದರು.


ಬಿಜೆಪಿ ಧರ್ಮಸ್ಥಳ ಚಲೋ ಮಾಡಿತ್ತು. ಲಕ್ಷಾಂತರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಅಲ್ಲಿ ಬಂದಿದ್ದರು. ರಾಜ್ಯ ಸರಕಾರ ಎಸ್‍ಐಟಿ ರಚಿಸಿದ್ದನ್ನು ನಾವು ಸ್ವಾಗತಿಸಿದ್ದು ನಿಜ. ದುರುದ್ದೇಶದಿಂದ ಮಾಡಿದ ದೂರಿನ ವಿಚಾರ ಬಯಲಿಗೆ ಬರಬೇಕೆಂಬ ಆಶಯ ನಮ್ಮದಾಗಿತ್ತು ಎಂದು ಸ್ಪಷ್ಟಪಡಿಸಿದರು. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಇಷ್ಟೆಲ್ಲ ಅಪಪ್ರಚಾರ ನಡೆದರೂ ಎಸ್‍ಐಟಿ ನೆಪ ಮಾಡಿಕೊಂಡು ರಾಜ್ಯ ಸರಕಾರ ಬಾಯಿ ಮುಚ್ಚಿಕೊಂಡು ಕೂತಿತ್ತಲ್ಲವೇ? ಈ ಷಡ್ಯಂತ್ರವನ್ನು ಈ ಅಯೋಗ್ಯ ಕಾಂಗ್ರೆಸ್ ಸರಕಾರಕ್ಕೆ ಅರ್ಥ ಮಾಡಿಕೊಳ್ಳಲು ಆಗಿಲ್ಲವಲ್ಲವೇ? ಇದು ರಾಜ್ಯದ ದುರಂತ ಎಂದು ಹೇಳಿದರು. ಬುರುಡೆ ಗ್ಯಾಂಗ್ ಪೈಸಾ ವಸೂಲಾತಿಗೆ ಧರ್ಮಸ್ಥಳದ ವಿಷಯದಲ್ಲಿ ಎಸ್‍ಐಟಿ ರಚಿಸಲು ಕೋರಿ ಅರ್ಜಿ ಹಾಕಿದ್ದಾಗಿ ನ್ಯಾಯಾಲಯಕ್ಕೆ ಅನಿಸಿತ್ತು. ಇದರ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ; ಬದಲಾಗಿ ವಸೂಲಾತಿ, ಅವರವರ ವೈಯಕ್ತಿಕ ಹಿತಾಸಕ್ತಿ ಇದರ ಹಿಂದಿದೆ ಎಂದು ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ಮೇ ತಿಂಗಳಿನಲ್ಲೇ ಆದೇಶ ಹೊರಡಿಸಿತ್ತು ಎಂದು ತಿಳಿಸಿದರು.


ಈ ಆದೇಶವನ್ನು ಮುಚ್ಚಿಟ್ಟು, ಆ ಬುರುಡೆ ಗ್ಯಾಂಗಿನವರು ಎಸ್‍ಐಟಿ ರಚಿಸಲು ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದರು. ಬುರುಡೆ ಗ್ಯಾಂಗನ್ನು ಬದಿಗಿಡಿ; ಇದರ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ; ವಸೂಲಾತಿ ವಿಚಾರ ಸುಪ್ರೀಂ ಕೋರ್ಟಿಗೆ ಅನಿಸಿತ್ತಾದರೆ, ಈ ರಾಜ್ಯದ ಮುಖ್ಯಮಂತ್ರಿಗೆ ಯಾಕೆ ಅನಿಸಿಲ್ಲ ಎಂದು ಕೇಳಿದರು. ಯಾವನೋ ಬೀದಿಯಲ್ಲಿ ಹೋಗುವವನು ಬಂದು ಹೇಳಿಕೆ ನೀಡುತ್ತಾನೆ; ಪೊಲೀಸ್ ಠಾಣೆಗೆ ಬಂದು ದೂರು ನೀಡುತ್ತಾನೆ, ಮಾಧ್ಯಮಗಳಲ್ಲಿ ಬಂದ ಹೇಳಿಕೆಯನ್ನು ಆಧಾರವಾಗಿ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಧರ್ಮಸ್ಥಳದ ಕೋಟ್ಯಂತರ ಭಕ್ತರ ಸಾಧಕ ಬಾಧಕಗಳು, ದೂರುದಾರನ ಗುರಿಯನ್ನು ಅರ್ಥ ಮಾಡಿಕೊಳ್ಳದೇ ಏಕಾಏಕಿ ಎಸ್‍ಐಟಿ ರಚಿಸಿದ್ದಾರೆ ಎಂದು ಆಕ್ಷೇಪಿಸಿದರು. ಮುಖ್ಯಮಂತ್ರಿಗಳು ರಾತ್ರಿ ಯಾವುದೇ ಕಾರಣಕ್ಕೆ ಎಸ್‍ಐಟಿ ರಚನೆ ಇಲ್ಲ ಎಂದಿದ್ದರು. ಮರುದಿನ, ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿಗಳಿಗೆ ಎಸ್‍ಐಟಿ ರಚಿಸಬೇಕು ಎಂದು ಅನಿಸುತ್ತದೆ ಎಂದು ಟೀಕಿಸಿದರು.


ಪ್ರಶ್ನೆಗೆ ಉತ್ತರಿಸಿದ ಅವರು, ಜಾತಿ ಸಮೀಕ್ಷೆ ಸಂಬಂಧ ಮಧ್ಯಂತರ ಆದೇಶವನ್ನು ರಾಜ್ಯದ ಗೌರವಾನ್ವಿತ ಹೈಕೋರ್ಟ್ ಇವತ್ತು ನೀಡಿದೆ. ಯಾವುದೇ ತಡೆ ನೀಡುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಹಿಂದೂ ಸಮಾಜವನ್ನು ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ; ಇದು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದರು. ರಾಜ್ಯಕ್ಕೆ ಜಾತಿ ಜನಗಣತಿ ಅಧಿಕಾರ ಇಲ್ಲದೇ ಇದ್ದರೂ ಮುಖ್ಯಮಂತ್ರಿಗಳು, ಹಠ ಮಾಡಿ ಸಮಾಜ ಒಡೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ. ಇದು ದುರಂತ; ರಾಜ್ಯಕ್ಕೆ ಮಾಡಿದ ಅನ್ಯಾಯ ಎಂದು ದೂರಿದರು. ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ನಿಮಗೆ ಮೇಯಲು ಕೇಂದ್ರದಿಂದ ಅನುದಾನ ಬೇಕೇ ಎಂದು ಕೇಳಿದರು. ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾಗಿವೆ. ರಾಜ್ಯದಲ್ಲಿ ಇವರೇನು ಅಭಿವೃದ್ಧಿ ಮಾಡಿದ್ದಾರೆ ಎಂದು ಕೇಳಿದರು. ಇದ್ದಂತ ಹಣವನ್ನು ಲೂಟಿ ಮಾಡಿದ್ದಾರೆ. ಎಸ್‍ಟಿ ಅಭಿವೃದ್ಧಿ ನಿಗಮದ ಹಗರಣ ಮಾಡಿ, ನಿಮ್ಮ ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿದ್ದಾರೆ. ಬಡವರು, ಪರಿಶಿಷ್ಟ ಜಾತಿ, ಪಂಗಡಕ್ಕೆ ಅನ್ಯಾಯ ಮಾಡುತ್ತ ಇದ್ದೀರಿ. ಹಣ ಪಾವತಿಸುತ್ತಿಲ್ಲ ಎಂದು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳೂ ನಡೆಯುತ್ತಿವೆ. ಅಭಿವೃದ್ಧಿ ಮಾಡಲು ಕಾಂಗ್ರೆಸ್ ಸರಕಾರಕ್ಕೆ ಯೋಗ್ಯತೆ ಇಲ್ಲ; ಅನುದಾನದ ಬಗ್ಗೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

Tags: B Y Vijayendrab y vijayendra | yatnal  one india kannadab.y. vijayendraBJPbjp president by vijayendraBY Vijayendraby vijayendra bjpby vijayendra delhi visitby vijayendra interviewby vijayendra newsby vijayendra speechby vijayendra teamby vijayendra todays newsby vijayendra vs yatnalCongress PartyDK Shivakumarsiddaramaiahv somanna vs by vijayendravijayendravijayendra bjpvijayendra newsVijayendra Prasadvijayendra speechvijayendra vs rebelsvijayendra vs yatnalyatnal vs by vijayendra
Previous Post

SL Bhyrappa ದೃಷ್ಟಿ ಕೋನ, ನನ್ನ ದೃಷ್ಟಿಕೋನ ಒಂದೇ ಆಗಿರಬೇಕು ಅಂತೇನಿಲ್ಲ

Next Post

‘ಕುಸುಮ್‌ ಸಿ’ಯೋಜನೆಗೆ ಭೂಮಿ ನೀಡಿ ಸಹಕರಿಸಿ: ಬೆಸ್ಕಾಂ ಎಂ.ಡಿ. ಡಾ. ಎನ್‌ ಶಿವಶಂಕರ್‌

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post

'ಕುಸುಮ್‌ ಸಿ'ಯೋಜನೆಗೆ ಭೂಮಿ ನೀಡಿ ಸಹಕರಿಸಿ: ಬೆಸ್ಕಾಂ ಎಂ.ಡಿ. ಡಾ. ಎನ್‌ ಶಿವಶಂಕರ್‌

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada