• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಉತ್ತರ ಕರ್ನಾಟಕದ ಚರ್ಚೆ ಮೇಲೆ ಮುಖ್ಯಮಂತ್ರಿಗಳ ಉತ್ತರ

ಪ್ರತಿಧ್ವನಿ by ಪ್ರತಿಧ್ವನಿ
December 19, 2025
in Top Story, ಕರ್ನಾಟಕ, ರಾಜಕೀಯ
0
ಉತ್ತರ ಕರ್ನಾಟಕದ ಚರ್ಚೆ ಮೇಲೆ ಮುಖ್ಯಮಂತ್ರಿಗಳ ಉತ್ತರ
Share on WhatsAppShare on FacebookShare on Telegram

ADVERTISEMENT

ಬೆಳಗಾವಿ, ಡಿಸೆಂಬರ್ 19: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನಪರಿಷತ್ತಿನಲ್ಲಿ ನಡೆದ ಚರ್ಚೆಗೆ ಉತ್ತರ ನೀಡಿದರು.

ಉತ್ತರ ಕರ್ನಾಟಕದ ಬಗ್ಗೆ ಎರಡೂ ಸದನಗಳಲ್ಲಿ ಹೆಚ್ಚು ಸದಸ್ಯರು ಮಾತನಾಡಿದ್ದಾರೆ. ಇಲ್ಲಿ ಬಿಜೆಪಿಯವರು 7 ಜನ ಹಾಗೂ ಕಾಂಗ್ರೆಸ್ ನ 5 ಜನ ಮಾತನಾಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರು ಸೇರಿದಂತೆ ಒಟ್ಟು 5 ಗಂಟೆ 48 ನಿಮಿಷ ಮಾತನಾಡಿದ್ದಾರೆ. ಉತ್ತರ ಕರ್ನಾಟಕದ ಚರ್ಚೆ ಅಧಿವೇಶನದ ಎರಡನೇ ದಿನವೇ ಪ್ರಾರಂಭವಾಗಿದ್ದು ಇದೇ ಮೊದಲನೇ ಬಾರಿ ಎಂದರು.

ಪ್ರಾದೇಶಿಕ ಅಸಮತೋಲನ ನಿವಾರಣೆಯಿಂದ ಸಮಾನತೆ ಸಾಧ್ಯ

ವಿಧಾನ ಪರಿಷತ್ ನ ಹಿರಿಯ ಮನೆ ಎಂದು ಕರೆಯಲಾಗುತ್ತಿದ್ದು, ಇಲ್ಲಿನ ಸದಸ್ಯರ ಮಾತಿಗೆ ತೂಕವಿರುತ್ತದೆ. ಸದಸ್ಯರ ಸಲಹೆಗಳು ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಬಹಳ ಮುಖ್ಯವಾಗುತ್ತದೆ. ಕರ್ನಾಟಕದಲ್ಲಿ 6.95 ಲಕ್ಷ ಜನರಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದಲ್ಲಿ 2.96,28,767 ಜನರಿದ್ದಾರೆ. 42% ಮಾತ್ರ ಉತ್ತರ ಕರ್ನಾಟಕದಲ್ಲಿ ಇದ್ದಾರೆ. 58% ದಕ್ಷಿಣ ಕರ್ನಾಟಕದಲ್ಲಿದ್ದಾರೆ. ಉತ್ತರ ಕರ್ನಾಟಕದಲ್ಲಿ 31 ಜಿಲ್ಲೆಗಳಲ್ಲಿ 14 ಉತ್ತರ ಕರ್ನಾಟಕಕ್ಕೆ ಬರುತ್ತವೆ. 224 ವಿಧಾನ ಸಭಾ ಕ್ಷೇತ್ರಗಳಲ್ಲಿ 97 ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಬರುತ್ತವೆ.

B. R. Bhaskar Prasad Podcast : ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?  #pratidhvani

ರಾಜ್ಯದ ಸಮಗ್ರ ಅಭಿವೃದ್ಧಿಗೆ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಅಸಮತೋಲನ ನಿವಾರಣೆಯಾಗಿ ಸಮಾನತೆ ಸಾಧಿಸಬೇಕು. ಪ್ರಾದೇಶಿಕ ಅಸಮಾನತೆ ನಿವಾರಿಸದಿದ್ದರೆ, ಜನರ ಕೂಗು ಇದ್ದೇ ಇರುತ್ತದೆ. ಉತ್ತರ ಕರ್ನಾಟಕದ ಬಗ್ಗೆ ಅಭಿವೃದ್ಧಿಯಾಗದೇ ಇರಲು ಹಲವು ಕಾರಣಗಳಿವೆ ಎಂದರು.

ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನ

ಬೆಂಗಳೂರು ಹಾಲು ಯೂನಿಯನ್ ಲ್ಲಿ ನೋಡಿದರೆ. ಒಂದು ದಿನಕ್ಕೆ 17 ಲಕ್ಷ ಲೀ. ಉತ್ಪಾದನೆಯಗುತ್ತಿದ್ದು, ಕಲ್ಬುರ್ಗಿ ಹಾಲು ಯೂನಿಯನ್ ದಲ್ಲಿ 67 ಸಾವಿರ ಲೀ. ಹಾಲು ಉತ್ಪಾದನೆಯಾಗುತ್ತದೆ. ಇದು ಪ್ರಾದೇಶಿಕ ಅಸಮಾನತೆಗೆ ಸ್ಪಷ್ಟ ಉದಾಹರಣೆಯಾಗಿದೆ. ಇದು ಜಿಲ್ಲಾವಾರು ತಲಾ ಆದಾಯದ ಮೇಲೂ ಪರಿಣಾಮ ಬೀರುತ್ತದೆ. ಕರ್ನಾಟಕ ರಾಜ್ಯದಲ್ಲಿ ಸರಾಸರಿ ತಲಾ ಆದಾಯ 3,39,813 ರೂ. ಇದೆ. ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲಿ ನಂ.1 ರಾಜ್ಯವಾಗಿದೆ. ಹೈನುಗಾರಿಕೆ ಚಟುವಟಿಕೆಗಳು , ಕೈಗಾರಿಕೆಗಳು ಜಾಸ್ತಿಯಾದರೆ, ಜನರ ವಲಸೆ ಕಡಿಮೆ , ಆರ್ಥಿಕ ತೆ ಸುಧಾರಿಸಿ, ತಲಾ ಆದಾಯವೂ ಜಾಸ್ತಿಯಾಗುತ್ತದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ತಲಾವಾರು ಆದಾಯ ಹೆಚ್ಚಾಗಿದೆ. ಆದ್ದರಿಂದ ಕರ್ನಾಟಕ ತಲಾವಾರು ಆದಾಯದಲ್ಲಿ ಮೊದಲನೇ ಸ್ಥಾನದಲ್ಲಿದೆ ಎಂದರು.

371 ಜೆ ವಿಶೇಷ ಸ್ಥಾನಮಾನ ಕೊಟ್ಟಿದ್ದು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ

ಹೈದರಾಬಾದ್ ಕರ್ನಾಟಕವನ್ನು 371 ಜೆ ಗೆ ಸೇರಿಸಬೇಕೆಂದುಬಹಳ ಹಿಂದಿನಿಂದಲೂ ಕೂಗಿತ್ತು. 1991ರಲ್ಲಿ ಹೆಚ್. ಕೆ.ಡಿ. ಬಿ ಪ್ರಾರಂಭವಾಯಿತು. ನಂತರ 2011_ 13 ರಲ್ಲಿ , 6/11/2013 ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು 371 ಜೆ ಸೇರ್ಪಡೆಯಾಯಿತು. 371 ಜೆ ವಿಶೇಷ ಸ್ಥಾನಮಾನ ಕೊಟ್ಟಿದ್ದು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ. ಬಿಜೆಪಿಯ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರುಅದನ್ನು ತಿರಸ್ಕರಿಸಿದರು. ಹೆಚ್ ಕೆ .ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ಶೇ. 85% ರಷ್ಟು ಹೈದರಾಬಾದ್ ಕರ್ನಾಟಕದಲ್ಲಿ ಮೀಸಲಾತಿ ನೀಡಬೇಕೆಂದು ಹಾಗೂ ರಾಜ್ಯದ ಇತರ ಭಾಗಗಳಲ್ಲಿನ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 8% ಮಾಡಬೇಕೆಂದು ಮಾಡಿದ್ದ ಶಿಫಾರಸ್ಸನ್ನು ಯಥಾವತ್ತು ಜಾರಿಗೆ ತರಲಾಯಿತು ಎಂದರು.

Siddaramaiah ;  ಯಾವ ಯಾವ ಜಿಲ್ಲೆಗೆ  ಎಷ್ಟು ಅನುದಾನ  ಪ್ರತಿ ಓದಿದ ಸಿಎಂ  #pratidhvani #siddaramaiah

ಬಿಜೆಪಿಯವರು ಉತ್ತರ ಕರ್ನಾಟಕ ಅಭಿವೃದ್ಧಿಯ ವಿರೋಧಿಗಳು

2013-14 ರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುತ್ತಿದೆ. 2023 ರಲ್ಲಿ 3000 ಕೋಟಿ, 2024/25 ರಲ್ಲಿ 3000 ಕೋಟಿ, 2025/2026 ರಲ್ಲಿ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು ಅನುದಾನ ನೀಡಿರುವುದು 24778 ಕೋಟಿಯಾದರೆ, ಬಿಡುಗಡೆಯಾಗಿರುವುದು 16229 ರೂಪಾಯಿ, ಇಲ್ಲಿಯವರೆಗೆ ವೆಚ್ಚವಾಗಿರುವುದು14890 ರೂಪಾಯಿಗಳು ಎಂದರು. 2013 -14 ರಿಂದ ಇಲ್ಲಿಯವರೆಗೆ ಬಿಜೆಪಿಯ ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಬಿಜೆಪಿಯವರು ಉತ್ತರ ಕರ್ನಾಟಕ ಅಭಿವೃದ್ಧಿಯ ವಿರೋಧಿಗಳು.

ರಾಜ್ಯಕ್ಕೆ ಬರಬೇಕಾಗಿದ್ದ 11495 ಕೋಟಿ ರೂ. ಕೇಂದ್ರ ಕೊಟ್ಟಿಲ್ಲ

15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ವಿಶೇಷ ಅನುದಾನ ಸೇರಿದಂತೆ ಒಟ್ಟು 11495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿದ್ದರೂ, ನಂತರ ಕೊಡಲಿಲ್ಲ. ಕಳೆದ ಮೂರು ವರ್ಷದಿಂದ ಈ ಮೊತ್ತವನ್ನು ಕೇಂದ್ರ ಮಂಜೂರು ಮಾಡಲೇ ಇಲ್ಲ. ವಿವಿಧ ಯೋಜನೆಗಳಡಿಯಲ್ಲಿ 125000 ಕೋಟಿ ರೂ.ಗಳು ಕೇಂದ್ರದಿಂದ ರಾಜ್ಯಕ್ಕೆ ಖೋತಾ ಆಗಿದೆ. ರಾಜ್ಯದಿಂದ ತೆರಿಗೆ 4.50 ಲಕ್ಷ ಕೋಟಿ ಸಂಗ್ರಹಣೆಯಾದರೂ , ನಮಗೆ ನ್ಯಾಯಯುತ ಪಾಲು ದೊರೆಯುತ್ತಿಲ್ಲ. ಕೆಕೆಆರ್ ಡಿಬಿ ಗೆ ಅನುದಾನ ಕೊಡದೇ , ಮಹಾರಾಷ್ಟ್ರದ ವಿಧರ್ಭ ಕ್ಕೆ ಹೆಚ್ಚಿನ ಅನುದಾನ ನೀಡುತ್ತಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ 173 ಟಿಎಂಸಿ ನೀರು ಬಳಸಿಕೊಳ್ಳಲು ಕೇಂದ್ರದಿಂದ ಇದುವರೆಗೆ ಅಧಿಸೂಚನೆ ಬಿಡುಗಡೆ ಮಾಡಿಲ್ಲ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ಅನುಮತಿ ನೀಡಿಲ್ಲ. ಈ ಬಗ್ಗೆ ಅನೇಕ ಬಾರಿ ಕೇಂದ್ರವನ್ನು ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ.

ನೀರಾವರಿ ಯೋಜನೆಗೆ ಕೇಂದ್ರದ ಅನುಮತಿ ದೊರೆತಿಲ್ಲ

ಜಲಜೀವನ್ ಮಿಷನ್ ನಡಿ 13500 ಸಾವಿರ ಕೋಟಿ ರೂ. ಕೇಂದ್ರ ಕೊಡದೇ , ರಾಜ್ಯದಲ್ಲಿ ಅಭಿವೃದ್ಧಿ ಸಾಧಿಸಲು ಹೇಗೆ ಸಾಧ್ಯ? ರಾಜ್ಯದ ಪಾಲಿನ 22000 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಳಸಾ ಬಂಡೂರಿ ಯೋಜನೆಗೆ ಸರ್ವ ಪಕ್ಷ ನಿಯೋಗ ಕೇಂದ್ರಕ್ಕೆ ಒಯ್ಯಲಾಗಿತ್ತು. ಆಗ ಪ್ರಧಾನಿ ಮೋದಿಯವರು ಸರಿಯಾದ ಪರಿಹಾರ ನೀಡಿರಲಿಲ್ಲ. 2018 ರಲ್ಲಿ ಯಡಿಯೂರಪ್ಪನವರು, ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಈ ಸಮಸ್ಯೆ ಬಗೆಹರಿಸುವುದಾಗಿ ಘೋಷಿಸಿದ್ದರು. ಆದರೆ ಇದುವರೆಗೆ ಈ ಯೋಜನೆಗೆ ಹಸಿರು ನಿಶಾನೆ ದೊರೆತಿಲ್ಲ ಎಂದರು.

Huli Kartik Exclusive Podcast : ದರ್ಶನ್ ಸರ್ ಎಷ್ಟು ಜನಕ್ಕೆ ಊಟ ಹಾಕಿದ್ದಾರೆ ಅಂತ ಯಾರಿಗೂ ಗೊತ್ತಿಲ್ಲ.?

ಕೇಂದ್ರದಿಂದ ರಾಜ್ಯದ ರೈತರಿಗೆ ಅನ್ಯಾಯ

ಕೇಂದ್ರ ಸರ್ಕಾರ 1 ಕೆಜಿ ಸಕ್ಕರೆಗೆ ಎಂ.ಎಸ್. ಪಿ ನಿಗದಿ 31 ರೂ 2019 ರಲ್ಲಿ ನಿಗದಿ ಮಾಡಿದೆ. ಆರು ವರ್ಷಗಳಲ್ಲಿ ಏನೂ ಬದಲಾವಣೆ ಮಾಡಿಲ್ಲ. 41 ರೂಗಳಿಗೆ ಹೆಚ್ಚಿಸಲು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಎಥನಾಲ್ ಹಂಚಿಕೆಯನ್ನು ಕೇಂದ್ರ ಸರ್ಕಾರವೇ ಮಾಡುವುದು. ರಫ್ತು ನಿಗದಿ ಮಾಡುವುದು ಕೂಡ ಕೇಂದ್ರ ಸರ್ಕಾರವೇ. ರೈತರಿಗೆ ಅನ್ಯಾಯ ಆಗಲು ಯಾರು ಕಾರಣ? ಎಫ್ ಆರ್ ಪಿ , ಎಂ ಎಸ್ ಪಿ , ಎಥನಾಲ್, ರಫ್ತು ಹೆಚ್ಚು ಮಾಡಲಿ. ಹೀಗಾದರೆ ಸ್ವಾಭಾವಿಕವಾಗಿ ಸಕ್ಕರೆ ಮತ್ತು ಕಬ್ಬಿನ ಬೆಲೆ ಹೆಚ್ಚಾಗುತ್ತದೆ ಎಂದರು.

ಕೇಂದ್ರ ಸರ್ಕಾರ ನ್ಯಾಯಯುತ ಬೆಲೆ ನಿಗದಿ ಮಾಡಬೇಕು

ಕಬ್ಬು ಬೆಳೆ: ಕರ್ನಾಟದಲ್ಲಿ 82 ಸಕ್ಕರೆ ಕಾರ್ಖಾನೆಗಳಿದ್ದು ಒಂದೇ ಒಂದು ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆ ಇದೆ. 11 ಸಹಕಾರಿ ಕಾರ್ಖಾನೆಗಳಿವೆ. ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ.

2025/26 ರಲ್ಲಿ 7.40 ಲಕ್ಷ ಪ್ರದೇಶದಲ್ಲಿ ಕಬ್ಬು ಬೆಳೆದಿದ್ದು, 600 ಲಕ್ಷ ಟನ್ ಕಬ್ಬು ಉತ್ಪಾದನೆ ಆಗಬಹುದೆಂದು ಅಂದಾಜಿಸಲಾಗಿದೆ. 2009 2010ರಿಂದ ಎಫ್ ಆರ್ ಪಿ ನಿಗದಿ ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರ ನಿಗದಿಮಾಡುತ್ತದೆ. 9.50 ಯಿಂದ 10.28 ರೂ. ಎಫ್ ಆರ್ ಪಿ ನಿಗದಿ ಮಾಡಿದ್ದಾರೆ.

2022/23 ರಿಂದ 10.25 ಮಾಡಿದ್ದಾರೆ. ಈ ವರ್ಷ ಒಂದು ಟನ್ ಕಬ್ಬಿಗೆ 3550 ರೂಪಾಯಿ ಗಳಿದ್ದು, ಹೆಚ್ ಅಂಡ್ ಟಿ ಕಳೆದರೆ ( 800 ರಿಂದ 900 ರೂ ಗಳಿವೆ )2700 ರೂಪಾಯಿ ನಿಗದಿಯಾಗುತ್ತದೆ. ಹೀಗಾಗಿ ರೈತರು ಹೋರಾಟ ಮಾಡಿದರು. ಸರ್ಕಾರ ರೈತರೊಂದಿಗೆ ಸುದೀರ್ಘ ಸಭೆ ನಡೆಸಿ 10.25 ಇಳುವರಿ ಇದ್ದವರಿಗೆ 3300 ರೂಪಾಯಿ ಕೊಡಲು ತೀರ್ಮಾನಿಸಲಾಯಿತು. ಚಳುವಳಿಯನ್ನು ಹಿಂಪಡೆಯಲಾಯಿತು ಎಂದರು.

ಉತ್ತರ ಕರ್ನಾಟಕದ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು

ಉತ್ತರ ಕರ್ನಾಟಕದ ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ , ಪೌಷ್ಠಿಕತೆ ಸುಧಾರಿಸಲು ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ. 10 ಸಾವಿರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರವೇಶ ದೊರೆತಿದೆ, 31 ಸಾವಿರ ಇಂಜಿನಿಯರಿಂಗ್ ಪ್ರವೇಶ ದೊರೆತಿದೆ., 12 ಸಾವಿರ ಡೆಂಟಲ್ ಸೇರಿದಂತೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ದೊರೆತಿದೆ. 371 ಜೆ ಜಾರಿಯಿಂದ ುಉತ್ತ ರ್ನಾಟಕದ ಎಲ್ಲ ಆಯಾಮಗಳಲ್ಲಿಯೂ ಅಭಿವೃದ್ಧಿಯಾಗಿದೆ. ಉದ್ಯೋಗದಲ್ಲಿಯೂ ಒತ್ತು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅದಕ್ಕೆ ಪೂರಕವಾಗಿ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ನೀಡಬೇಕು ಎಂದರು.

ನಮ್ಮ ಸರ್ಕಾರ ಅಸ್ಥಿರವಾಗುವ ಪ್ರಶ್ನೆಯೇ ಇಲ್ಲ

ಎರಡನೇ ಬಾರಿ ನಾನು ಮುಖ್ಯಮಂತ್ರಿಯಾಗಿದ್ದು, ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ.. ಬಿಜೆಪಿಯವರು 9 ವರ್ಷದಲ್ಲಿ 5 ಜನ ಮುಖ್ಯಮಂತ್ರಿಗಳಾಗಿದ್ದರು. ಬಿಜೆಪಿಯ ಪ್ರಯತ್ನ ಹುಳಿಹಿಂಡುವ ಪ್ರಯತ್ನ ಸಫಲವಾಗುವುದಿ್ಲ. ನಮ್ಮ ಸರ್ಕಾರ ಗಟ್ಟಿಯಾಗಿದ್ದು, ಅಸ್ಥಿರವಾಗುವ ಪ್ರಶ್ನೆಯೇ ಇಲ್ಲ. ಇದು ಬಿಜೆಪಿಯ ಭ್ರಮೆ.ತನ್ನ ಪೂರ್ಣ ಅವಧಿಯನ್ನು ಮುಗಿಸಿ , ನಂತರ 2028 ರಲ್ಲೂ ಕಾಂಗ್ರೆಸ ಸರ್ಕಾರ ಅಧಿಕಾರಕ್ಕೆ ಬರಲಿದೆ. 2008 , 2018 ಅವಧಿಯಲ್ಲಿ ಬಿಜೆಪಿ ಜನಾರ್ಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ರಾಜ್ಯದ ಜನರು ಬಿಜೆಪಿಗೆ ಒಮ್ಮತ ತೋರಿಸಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ

Tags: belagavi siddaramaiahCM Siddaramaiahcm siddaramaiah angrycm siddaramaiah belagavicm siddaramaiah lunchcm siddaramaiah newscm siddaramaiah speechcm siddaramaiah today newscm siddaramaiah vs yatnalkarnataka cm siddaramaiahsiddaramaiahsiddaramaiah assemblysiddaramaiah belagavisiddaramaiah in belagavisiddaramaiah muda casesiddaramaiah newssiddaramaiah news todaysiddaramaiah speechsiddaramaiah statementsiddaramaiah viral videoYathindra Siddaramaiah
Previous Post

Bengaluru: ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ

Next Post

Daily Horoscope: ಇಂದು ಈ ರಾಶಿಗಳಿಗೆ ವೃತ್ತಿಯಲ್ಲಿ ಯಶಸ್ಸು..!

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
Daily Horoscope: ಇಂದು ಈ ರಾಶಿಗಳಿಗೆ ವೃತ್ತಿಯಲ್ಲಿ ಯಶಸ್ಸು..!

Daily Horoscope: ಇಂದು ಈ ರಾಶಿಗಳಿಗೆ ವೃತ್ತಿಯಲ್ಲಿ ಯಶಸ್ಸು..!

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada