ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾಗಶಃ ಹೊರ ಬಿದ್ದಿದ್ದು ಬಿಜೆಪಿಯ ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದೆ. ಆಪರೇಷನ್ ಕಮಲ ಮೂಲಕ ಬಿಜೆಪಿ ಹಾರಿದ್ದ ಘಟಾನುಘಟಿ ನಾಯಕರು ಈ ಬಾರಿಯ ಚುನಾವಣೆಯಲ್ಲಿ ಸೋಲನ್ನು ಕಂಡಿದ್ದಾರೆ.
ಚಿಕ್ಕಬಳ್ಳಾಪುರಕ್ಕೆ ಸಾಕಷ್ಟು ಅನುದಾನಗಳನ್ನು ತಂದುಕೊಡುವಲ್ಲಿ ಯಶಸ್ವಿಯಾಗಿದ್ದ ಡಾ. ಕೆ ಸುಧಾಕರ್ ಇಂದು ಚಿಕ್ಕಬಳ್ಳಾಪುರದಲ್ಲಿ ಸೋಲಿನ ರುಚಿ ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ.
ಇತ್ತ ಹಿರೇಕೇರೂರಿನಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಸೋಲನ್ನು ಕಂಡಿದ್ದಾರೆ. ಇತ್ತ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದ ಯುಬಿ ಬಣಕರ್ ಬಿ.ಸಿ ಪಾಟೀಲ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ.



