ಚಿಕ್ಕಬಳ್ಳಾಪುರ : ನೂತನ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ವಿಶ್ವ ವಿಖ್ಯಾತ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕೋವಿಡ್ 19 ಸಾಂಕ್ರಾಮಿಕ ರೋಗಗಳು ಹರಡದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 2022 ಡಿಸೆಂಬರ್ 31 ರ ಸಂಜೆ 6 ಗಂಟೆಯಿಂದ 2023 ಜನವರಿ1 ರ ಬೆಳಗ್ಗೆ 6 ಗಂಟೆಯ ವರೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದರಿಂದ ಪ್ರವಾಸಿಗರು ಈ ಸಮಯದಲ್ಲಿ ನಂದಿ ಬೆಟ್ಟದ ಕಡೆ ಬಾರದಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್ ಎಂ ನಾಗರಾಜ್ ಮನವಿ ಮಾಡಿದ್ದಾರೆ.