• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
March 16, 2025
in ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram
  • ದೂರು ಸಲ್ಲಿಸಲು ಇಲಾಖಾ ವ್ಯಾಪ್ತಿಯ ಆಸ್ಪತ್ರೆಯ ನಿರ್ದೇಶಕರಿಗೆ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸೂಚನೆ

ಬೆಂಗಳೂರು, ಮಾರ್ಚ್ 16: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ “ಬ್ರೇಕ್‌” ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ.

ADVERTISEMENT

ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ
ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ

ಕಳೆದ ಒಂದು ವಾರದಿಂದ ವಿಕಾಸ ಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಇತರ ಸದಸ್ಯರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು, ಈ ಕುರಿತ ಪ್ರಕರಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು (ಡಿಎಂಇ) ಕೂಡಲೇ ಸಹಾಯಕ ಆಯುಕ್ತರಿಗೆ (ಕಂದಾಯ ಉಪವಿಭಾಗ) ದೂರುಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು.

ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಪರಿತ್ಯಕ್ತ ಪೋಷಕರಿಗೆ ಸಚಿವರು ಕರೆ ನೀಡಿದರು.

ತಮ್ಮ ಮಕ್ಕಳು ನಮ್ಮನ್ನು ನೋಡಿಕೊಳ್ಳಲು ಆಗದೇ, ತೊರೆದಿದ್ದಾರೆ. ಕೆಲವರು ಆರ್ಥಿಕ ಸಂಕಷ್ಟಗಳಿಂದ ನಮ್ಮನ್ನು ಇಲ್ಲಿ ಬಿಟ್ಟಿದ್ದಾರೆ. ನಮ್ಮ ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ ಮಕ್ಕಳು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಸೇರಿಸಿ ಹೊರಟುಹೋಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ, ವಸತಿ, ಆಶಯ ಉಚಿತವಾಗಿ ಸಿಗುತ್ತದೆ ಎಂಬ ಉದ್ದೇಶದಿಂದ ನಮ್ಮನ್ನು ಇಲ್ಲಿ ಬಿಟ್ಟುಹೋಗಿದ್ದಾರೆ ಎಂದು ಪರಿತ್ಯಕ್ತ ಪೋಷಕರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂಥ ಪರಿತ್ಯಕ್ತ ಹಿರಿಯ ನಾಗರಿಕರನ್ನು ಬಿಐಎಂಎಸ್ ಅಧಿಕಾರಿಗಳು ಬೆಳಗಾವಿ ಮತ್ತು ಸುತ್ತಮುತ್ತಲಿನ 70 ಹಿರಿಯ ನಾಗರಿಕರ ನಿವೃತ್ತಿ ಗೃಹಗಳಲ್ಲಿ ಅಥವಾ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ.

ಹಿರಿಯ ನಾಗರಿಕರ ಕಾಯ್ದೆಯಡಿ ಕಾನೂನು ಕ್ರಮ

ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ದೂರುಗಳನ್ನು ಸಲ್ಲಿಸಬೇಕು ಎಂದು ಡಾ. ಪಾಟೀಲ್ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

“ಈ ಕಾನೂನಿನ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರಿಗೆ ಆರ್ಥಿಕ ಮತ್ತು ವೈದ್ಯಕೀಯ ಬೆಂಬಲವನ್ನು ಒದಗಿಸಬೇಕು ಎಂಬ ನಿಯಮವಿದೆ. ಅವರು ಹಾಗೆ ಮಾಡಲು ವಿಫಲವಾದರೆ, ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ” ಎಂದು ಡಾ. ಪಾಟೀಲ್ ಹೇಳಿದರು.

ಕಾಯ್ದೆಯ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ತಿಳಿಸಲಾಗಿದೆ.

Tags: 'icu grandpa' snuggles babies too little to leave hospital when their parents can't be thereactual notice of transfer of property actactual notice transfer of propertycan parents yell at their kidsChildrendeath threats mom throw kid in poolgripping hospital storieshealing touch experiencehospital tv shownotice of transfer of property actnotice to tenant to vacate rental property indianotice under section 3 of transfer of property actnotice under transfer of property actpain is for the livingParentsparents not homepatient in locked statetransfer of property actprofessional lives hospitalproperty lawsection 3 of transfer of property actstressful hospital situationsthe chapman family supernanny full episodetransfer of propertytransfer of property act 1882transfer of property transferor and transfereewhy parents should not yell at their kids
Previous Post

ಕಾಂಗ್ರೆಸ್ ಕೇವಲ ಪೇಪರ್ ಟೈಗರ್ ಅಷ್ಟೇ..! ಧರ್ಮ-ಧರ್ಮದ ನಡುವೆ ಬಿರುಕು ತಂದಿದ್ದು ಕಾಂಗ್ರೆಸ್ : ಬಿ.ವೈ ವಿಜಯೇಂದ್ರ 

Next Post

ಬಿವೈ ವಿಜಯೇಂದ್ರ ಬಣಕ್ಕೆ ಹೈಕಮಾಂಡ್ ಬಿಗ್ ಶಾಕ್ !!

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post
ಬಿವೈ ವಿಜಯೇಂದ್ರ ಬಣಕ್ಕೆ ಹೈಕಮಾಂಡ್ ಬಿಗ್ ಶಾಕ್ !!

ಬಿವೈ ವಿಜಯೇಂದ್ರ ಬಣಕ್ಕೆ ಹೈಕಮಾಂಡ್ ಬಿಗ್ ಶಾಕ್ !!

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada