ಕರೋನದಿಂದ ಅನಾಥರಾದ ಮಕ್ಕಳನ್ನು ನವೋದಯ ವಿದ್ಯಾಲಯದಲ್ಲಿ ಓದಿಸಿ: ಕೇಂದ್ರ ಸರ್ಕಾರಕ್ಕೆ ಸಿಪಿಐ(ಎಂ) ಒತ್ತಾಯ

“ಕರೋನದಿಂದ ತಮ್ಮ ತಂದೆ ತಾಯಿಯನ್ನು ಕಳೆದುಕೊಂಡಿರುವ ಮಕ್ಕಳು ಉದ್ಯೋಗಕ್ಕೆ ಅರ್ಹತೆ ಪಡೆಯುವವರೆಗೆ ಮತ್ತು ಸಾಮಾನ್ಯ ಜೀವನವನ್ನು ನಡೆಸುವ ಸಾಮರ್ಥ್ಯವಿರುವವರೆಗೂ ಸರ್ಕಾರದ ನವೋದಯ ವಿದ್ಯಾಲಯಗಳಲ್ಲಿ ಅವರನ್ನು ನೋಡಿಕೊಳ್ಳಲು ಮತ್ತು ಶಿಕ್ಷಣ ನೀಡಲು ಭಾರತ ಸರ್ಕಾರ ಕೈಗೊಳ್ಳಬೇಕು” ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಟ್ವೀಟ್ ಮಾಡಿದ್ದಾರೆ.

ಕರೋನ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಅನಾಥವಾಗಿರುವ ಮಕ್ಕಳ ಶಿಕ್ಷಣವನ್ನು ನವೋದಯ ವಿದ್ಯಾಲಯದಲ್ಲಿ ಪ್ರವೇಶ ನೀಡಿ ಉದ್ಯೋಗಕ್ಕೆ ಅರ್ಹತೆ ಪಡೆಯುವವರೆಗೂ ನೋಡಿಕೊಳ್ಳಬೇಕೆಂದು ಸಿಪಿಐ (ಎಂ) ಬುಧವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ವರದಿಯ ಪ್ರಕಾರ, ಏಪ್ರಿಲ್ 1 ರಿಂದ ಮೇ 25 ರವರೆಗೆ ಕರೋನ ಸೋಂಕಿನಿಂದ ಪೋಷಕರು ಬಲಿಯಾದ ನಂತರ ದೇಶಾದ್ಯಂತ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಂಗಳವಾರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಹೇಳಿದ್ದಾರೆ.

ಕರೋನ ವೈರಸ್‌ನಿಂದಾಗಿ ಪೋಷಕರನ್ನು ಕಳೆದುಕೊಂಡಿರುವ ಪ್ರತಿ ದುರ್ಬಲ ಮಗುವನ್ನು ಬೆಂಬಲಿಸಲು ಮತ್ತು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಈ ಹಿಂದೆ, ಸಚಿವಾಲಯ ಮತ್ತು ದೇಶದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಎರಡೂ ಪೋಷಕರನ್ನು ಸಾಂಕ್ರಾಮಿಕ ರೋಗದಿಂದ ಕಳೆದುಕೊಂಡಿರುವ ಮಕ್ಕಳನ್ನು ಅಕ್ರಮವಾಗಿ ದತ್ತು ತೆಗೆದುಕೊಳ್ಳುವುದರ ವಿರುದ್ಧ ಎಚ್ಚರಿಕೆ ನೀಡಿತ್ತು.

“ಇಂತಹ ಮಕ್ಕಳನ್ನು ಅಕ್ರಮವಾಗಿ ದತ್ತು ತೆಗೆದುಕೊಳ್ಳುವುದರ ವಿರುದ್ಧ ಕೇವಲ ಘೋಷಣೆಗಳು ಮತ್ತು ಎಚ್ಚರಿಕೆಗಳನ್ನು ಏನು ಮಾಡುವುದಿಲ್ಲ” ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಟ್ವೀಟ್ ಮಾಡಿದ್ದಾರೆ.

“ಅವರು ಉದ್ಯೋಗಕ್ಕೆ ಅರ್ಹತೆ ಪಡೆಯುವವರೆಗೆ ಮತ್ತು ಸಾಮಾನ್ಯ ಜೀವನವನ್ನು ನಡೆಸುವ ಸಾಮರ್ಥ್ಯವಿರುವವರೆಗೂ ಸರ್ಕಾರದ ನವೋದಯ ವಿದ್ಯಾಲಯಗಳಲ್ಲಿ ನೋಡಿಕೊಳ್ಳಲು ಮತ್ತು ಶಿಕ್ಷಣವನ್ನು ಭಾರತ ಸರ್ಕಾರ ನೀಡಬೇಕು” ಎಂದು ಅವರು ತಮ್ಮ ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.

ಈ ಮೊದಲು ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಕೂಡ ಕರೋನದಿಂದ ತಮ್ಮ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ನವೋದಯ ಶಾಲೆಯಲ್ಲಿ ಶಿಕ್ಷಣ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದರು. ಈಗ ಸೋನಿಯಾ ಗಾಂಧಿಯವರ ದಾರಿಯನ್ನೇ ಅನುಸರಿಸುತ್ತಿರುವ ಸಿಪಿಐ(ಎಂ) ಕೂಡ ಈ ವಿಷಯದ ಕುರಿತು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...