• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

ಪ್ರತಿಧ್ವನಿ by ಪ್ರತಿಧ್ವನಿ
July 30, 2025
in Top Story, ಅಂಕಣ, ಇದೀಗ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ವಿಶ್ವದಲ್ಲೇ ಆಸ್ಟ್ರೇಲಿಯಾ (Australia) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವ ಆಸ್ಟ್ರೇಲಿಯಾ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ (social media ban) ಘೋಷಣೆ ಮಾಡಿದೆ.

ADVERTISEMENT

ಇದರಲ್ಲಿ ಯೂಟ್ಯೂಬ್​​ ಕೂಡ ಸೇರಿಕೊಂಡಿದೆ. ಯೂಟ್ಯೂಬ್ ಸಾಮಾಜಿಕ ಮಾಧ್ಯಮವಲ್ಲ ಎಂದು ಯುಟ್ಯೂಬ್​​​ ಹೇಳಿಕೆಯೊಂದನ್ನು ನೀಡಿದ್ದರೂ ಅದನ್ನು ಕೂಡ ಆಸ್ಟ್ರೇಲಿಯಾ ಬ್ಯಾನ್ ಮಾಡಿದೆ. ಅಲ್ಗಾರಿದಮಿಕ್ ಫೀಡ್‌ಗಳು, ಸಂವಾದಾತ್ಮಕ ವಿಚಾರಗಳನ್ನು, ಕಾಮೆಂಟ್​​ ವಿಭಾಗದಲ್ಲೂ ಯೂಟ್ಯೂಬ್ ತಮ್ಮದೇ ಆದ ಪ್ಲಾಟ್‌ಫಾರ್ಮ್‌ಗಳಂತೆಯೇ ಕಾರ್ಯನಿರ್ವಹಿಸುತ್ತದೆ. ಇನ್ನು ಮೆಟಾ ಮತ್ತು ಸ್ನ್ಯಾಪ್‌ಚಾಟ್‌ನಂತಹ ತಂತ್ರಜ್ಞಾನ ದೈತ್ಯರ ಟೀಕೆಯ ನಂತರ 16 ವರ್ಷದೊಳಗಿನ ಬಳಕೆದಾರರಿಗೆ ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ಎಕ್ಸ್, ಸ್ನ್ಯಾಪ್‌ಚಾಟ್​​​ನ್ನು ನಿಷೇಧ ಮಾಡಲಾಗಿದೆ ಎಂದು ಹೇಳಿತ್ತು. ಇದೀಗ ಯುಟ್ಯೂಬ್​​​ ಅನ್ನೂ ಬ್ಯಾನ್​​ ಮಾಡಲಾಗಿದೆ.

ಆಸ್ಟ್ರೇಲಿಯಾದಲ್ಲಿ ಮಕ್ಕಳ ಭವಿಷ್ಯಕ್ಕಾಗಿ ಹೊಸ ಕಾನೂನು ಘೋಷಣೆ ಮಾಡಲಾಗಿದೆ. 16 ವರ್ಷದ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವಂತಿಲ್ಲ. ಒಂದು ವೇಳೆ ಬಳಸಿದ್ರೆ ಕೋಟಿ ಕೋಟಿ ದಂಡವನ್ನು ವಿಧಿಸಲಾಗುವುದು. ಈ ಬಗ್ಗೆ ಸ್ವತಃ ಪ್ರಧಾನಿ ಆಂಥೋನಿ ಅಲ್ಬನೀಸ್ ಎಕ್ಸ್​​ನಲ್ಲಿ ಪೋಸ್ಟ್​​ವೊಂದನ್ನು ಹಂಚಿಕೊಂಡಿದ್ದಾರೆ. ಮಕ್ಕಳನ್ನು ಆನ್‌ಲೈನ್‌ನಿಂದ ರಕ್ಷಿಸಲು, ಈ ಅಭ್ಯಾಸದಿಂದ ದೂರವಿರಿಸಲು ಸರ್ಕಾರ ಈ ಕೆಲಸಕ್ಕೆ ಮುಂದಾಗಿದೆ. ಆದ್ದರಿಂದ ನಾವು 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷೇಧಿಸುತ್ತಿದ್ದೇವೆ. ಈ ಸೋಶಿಯಲ್​​ ಮೀಡಿಯಾದ ವೇದಿಕೆಯ ಮೂಲಕ ತಮ್ಮದೇ ಆಗಿರುವ ಕೆಟ್ಟ ಲೋಕವನ್ನು ಸೃಷ್ಟಿಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ಆಂಥೋನಿ ಅಲ್ಬನೀಸ್ ಹೇಳಿಕೆ ನೀಡಿದ್ದಾರೆ. ಇನ್ನು ನಿರ್ಧಾರ ತೆಗೆದುಕೊಳ್ಳುವ ಮೊದಲು ಕೆಲವೊಂದು ವಿಚಾರಗಳನ್ನು ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರಸ್ತಾಪಿಸಿದ್ದಾರೆ. ಈ ಸಾಮಾಜಿಕ ಜಾಲತಾಣದ ಅಭ್ಯಾಸದಿಂದ ಮೂವರು ಯುವ ಹದಿಹರೆಯದವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಈ ಕಾನೂನನ್ನು ತಿಂಗಳ ಕೊನೆಯಲ್ಲಿ ಜಾರಿಗೆ ಬರುವಂತೆ ಆದೇಶವನ್ನು ನೀಡಿದ್ದಾರೆ. ತಂತ್ರಜ್ಞಾನ ಕಂಪನಿಗಳು ಅಪ್ರಾಪ್ತ ವಯಸ್ಕ ಖಾತೆಗಳನ್ನು ನಿಷ್ಕ್ರಿಯಗೊಳಿಸುವುದು, ಹೊಸ ಖಾತೆಗಳನ್ನು ರಚಿಸುವುದನ್ನು ತಡೆಯುವುದು ಮತ್ತು ಯಾವುದೇ ಪರಿಹಾರೋಪಾಯಗಳನ್ನು ಸರಿಪಡಿಸುವುದು ಈ ತಕ್ಷಣದಿಂದಲೇ ಮಾಡಬೇಕು. ಒಂದು ವೇಳೆ ಇದನ್ನು ಮಾಡಿಲ್ಲ ಎಂದರೆ 50 ಮಿಲಿಯನ್ (₹4,37,11,30,000)ದಂಡವನ್ನು ವಿಧಿಸಲಾಗುವುದು ಎಂದು ಹೇಳಿದ್ದಾರೆ. ಹದಿಹರೆಯದವರು ಇನ್ನೂ YouTube ವಿಷಯವನ್ನು ವೀಕ್ಷಿಸಲು ಸಾಧ್ಯವಾಗುತ್ತದೆ, ಆದರೆ ಖಾತೆಯಿಲ್ಲದೆ ಅವರು ಸಂವಹನ ನಡೆಸಲು, ಕಾಮೆಂಟ್ ಮಾಡಲು ಅಥವಾ ಪೋಸ್ಟ್ ಮಾಡಲು ಸಾಧ್ಯವಾಗುವುದಿಲ್ಲ. ಆನ್‌ಲೈನ್ ಗೇಮಿಂಗ್, ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳು, ಶಿಕ್ಷಣ ಮತ್ತು ಆರೋಗ್ಯ ಸಂಬಂಧಿತ ವಿಷಯಗಳು ಕಡಿಮೆ ಸಾಮಾಜಿಕ ಮಾಧ್ಯಮ ಹಾನಿಗಳನ್ನು ಉಂಟು ಮಾಡುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags: Anthoni AlbanisAustraliaFacebookInstagramPmSnapchatSocial MediaXX PostYouTube
Previous Post

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

Next Post

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
Next Post

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada