ಚಿಕ್ಕಬಳ್ಳಾಪುರ : ಟ್ರೆಕ್ಕಿಂಗ್ಗೆಂದು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಗ್ರಾಮದ ಬಳಿ ಇರುವ ತಪತೇಶ್ವರ ಬೆಟ್ಟಕ್ಕೆ ಆಗಮಿಸಿದ್ದ 30ಕ್ಕೂ ಅಧಿಕ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆಯು ವರದಿಯಾಗಿದೆ.

ಹೆಜ್ಜೇನು ದಾಳಿಗೆ ಒಳಗಾದ ವಿದ್ಯಾರ್ಥಿಗಳು ಶ್ರೀನಿವಾಸಪುರ ತಾಲೂಕು ವೇಣು ವಿದ್ಯಾ ಸಂಸ್ಥೆಗೆ ಸೇರಿದವರು ಎನ್ನಲಾಗಿದೆ.
ಗಾಯಗೊಂಡಿರುವ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಚಿಂತಾಮಣಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ . ಅದೃಷ್ಟವಶಾತ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.





