• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿಯಾನ್ ವಿಕ್ರಮ್ ಅಭಿನಯದ ಬಹು ನಿರೀಕ್ಷಿತ ಚಿತ್ರ “ತಂಗಲಾನ್‍” ಆಗಸ್ಟ್ 15 ರಂದು ತೆರೆಗೆ ಬರಲಿದೆ..

ಪ್ರತಿಧ್ವನಿ by ಪ್ರತಿಧ್ವನಿ
August 8, 2024
in Top Story, ಇತರೆ / Others
0
ಚಿಯಾನ್ ವಿಕ್ರಮ್ ಅಭಿನಯದ ಬಹು ನಿರೀಕ್ಷಿತ ಚಿತ್ರ “ತಂಗಲಾನ್‍” ಆಗಸ್ಟ್ 15 ರಂದು ತೆರೆಗೆ ಬರಲಿದೆ..
Share on WhatsAppShare on FacebookShare on Telegram

ಜ್ಞಾನವೇಲ್ ರಾಜ್ ನಿರ್ಮಾಣದ,‌ ಪ.ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ (Chiyan Vikram) ಅಭಿನಯದ ‘ತಂಗಲಾನ್’ (Tangalan) ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಿದ್ದಾರೆ “ಕಬಾಲಿ” (Kabali) ಖ್ಯಾತಿಯ ನಿರ್ದೇಶಕ ಪ. ರಂಜಿತ್‍ (Director P Ranjith).

ADVERTISEMENT

ಈ ಚಿತ್ರದಲ್ಲಿ ವಿಕ್ರಮ್(Vikram), ಮಾಳವಿಕಾ ಮೋಹನನ್(Malavika Mohanan), ಪಾರ್ವತಿ(Parvathi), ಬ್ರಿಟಿಷ್‍ ನಟ ಡೇನಿಯಲ್‍ (Daniyal)ಮುಂತಾದವರು ನಟಿಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡಲು ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ವಿಕ್ರಮ್‍, ‘ನಾನು ಇದುವರೆಗೂ “ಅನ್ನಿಯನ್”, “ಪಿತಾಮಗನ್” ಸೇರಿದಂತೆ ಹಲವು ಚಿತ್ರಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ಮಾಡಿದ್ದೇನೆ. ಆದರೆ, ‘ತಂಗಲಾನ್‍’ ಚಿತ್ರಕ್ಕೆ ಹೋಲಿಸಿದರೆ ಅದು ಶೇ. 8ರಷ್ಟು ಮಾತ್ರ.

ಇದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಚಿತ್ರ. ಪ್ರತಿ ದೃಶ್ಯಕ್ಕೂ ನಾವು ಸಾಕಷ್ಟು ಕಷ್ಟಪಟ್ಟಿದ್ದೇವೆ. ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಏಟು ಬಿದ್ದಿವೆ. ರೊಮ್ಯಾಂಟಿಕ್‍ ದೃಶ್ಯಗಳು ಸಹ ಕಷ್ಟವಾಗಿತ್ತು. ನಾವು ನಮಗೆ ಗೊತ್ತಿಲ್ಲದ ಪಾತ್ರಗಳಾಗುವುದೇ ನಿಜವಾದ ಕಷ್ಟ. ಬ್ರಿಟಿಷರ ಆಳ್ವಿಕೆ ಸಮಯದಲ್ಲಿ ಏನಾಗಿದ್ದರಿಬಹುದು? ಆಗಿನ ಬುಡಕಟ್ಟು ಜನಾಂಗದವರು ಹೇಗಿದ್ದಿರಬಹುದು ಎಂದು ನಮಗೆ ಗೊತ್ತಿಲ್ಲ. ಹಾಗಾಗಿ, ಯಾವ ದೃಶ್ಯವೂ ಸುಲಭವಾಗಿರಲಿಲ್ಲ. ಇಲ್ಲಿ ನಾವು ಅವರ ತರಹ ನಟನೆ ಮಾಡಬೇಕು ಎಂಬುದಕ್ಕಿಂತ, ಅವರ ತರಹ ಇರಬೇಕಿತ್ತು.

ಈ ಚಿತ್ರಕ್ಕಾಗಿ ಒಂದು ಶತಕದ ಹಿಂದಕ್ಕೆಹೋಗುವಂತಾಯಿತು ಎಂದು ತಿಳಿಸಿದರು.ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದಾರಂತೆ ಹಾಗೂ ತುಂಬಾ ತೂಕವನ್ನು ಕಳೆದುಕೊಂಡಿದಾರಂತೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು. ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್‍ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಹಂಚಿಕೊಂಡರು.

ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಮಾಡುವುದಕ್ಕೆ ರಿಷಭ್‍ ಶೆಟ್ಟಿ (Rishab Shetty) ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ (Kanthara) ದೊಡ್ಡ ಸ್ಫೂರ್ತಿ ಎಂದು ತಿಳಿಸಿದ ಚಿಯಾನ್ ವಿಕ್ರಮ್, ಉತ್ತಮ ಕಂಟೆಂಟ್ ಇದ್ದರೆ ಜಗತ್ತಿನ ಯಾವ ಮೂಲೆಗೆ ಬೇಕಾದರೂ ತೆಗೆದುಕೊಂಡು ಹೋಗಬಹುದು ಎನ್ನುವುದನ್ನು ಆ ಚಿತ್ರ ತೋರಿಸಿತು’ ಎಂದರು.ಚಿತ್ರ ಸಾಗಿ ಬಂದ ಬಗ್ಗೆ ನಿರ್ದೇಶಕ ಪ.ರಂಜಿತ್ ವಿವರಿಸಿದರು. “ನಾನು ಮತ್ತು ವರಲಕ್ಷ್ಮೀ” ಕನ್ನಡ ಚಿತ್ರದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡ ನಟಿ ಮಾಳವಿಕ ಮೋಹನನ್ “ತಂಗಲಾನ್” ಚಿತ್ರದ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಹಾಲಿವುಡ್ ನಟ ಡೇನಿಯಲ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಈ ಚಿತ್ರ ಪ್ರತಿಷ್ಠಿತ ಕೆ.ವಿ‌.ಎನ್ ಸಂಸ್ಥೆಯ ಮೂಲಕ ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ‌.

Tags: Chiyan VikramDeniyalKANTHARAMalavika MohannParvatiRishab ShettyTangalan
Previous Post

ಮಗನ ದೇಹವನ್ನು ಕೈಚೀಲದಲ್ಲಿ ತಂದೆಗೆ ನೀಡಿದ ಅಧಿಕಾರಿಗಳು!

Next Post

ದುನಿಯಾ ವಿಜಯ್ ಗಣೇಶ್ ಗೆ ರಿಶಬ್ ಶೆಟ್ಟಿ ಕೊಟ್ರು ಬಿಗ್ ಟ್ವಿಸ್ಟ್

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

May 26, 2026
Next Post

ದುನಿಯಾ ವಿಜಯ್ ಗಣೇಶ್ ಗೆ ರಿಶಬ್ ಶೆಟ್ಟಿ ಕೊಟ್ರು ಬಿಗ್ ಟ್ವಿಸ್ಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada