ನಿರ್ಮಾಣ ಹಂತದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಕು ಕಟ್ಟಡ ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಆರೂರು ಬಳಿ ಶನಿವಾರ ರಾತ್ರಿ ಕಾರ್ಮಿಕರು ಸ್ಟೀಲ್ ಫ್ರೇಂ ಅಳವಡಿಸಿ ಸಿಮೆಂಟ್ ಹಾಕುವ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಹಾಗೂ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ನಾಗರಾಜ್ ಕಾಮಗಾರಿ ತ್ವರಿತವಾಗಿ ನಡೆಸಬೇಕು ಎಂಬ ಕಾರಣಕ್ಕೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಈ ಬಗ್ಗೆ ಇಂಜಿನಿಯರ್‌ಗಳಿಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಲೋಪದೋಷ ಏನೇ ಇದ್ದರೂ ಸರಿಪಡಿಸಲಾಗುವುದು ಎಂದು ಎಂದು ತಿಳಿಸಿದ್ದಾರೆ.





