• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಪ್ರತಿಧ್ವನಿ by ಪ್ರತಿಧ್ವನಿ
January 30, 2026
in Top Story, ಕರ್ನಾಟಕ, ಸಿನಿಮಾ
0
ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
Share on WhatsAppShare on FacebookShare on Telegram

ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಕನ್ನಡ ಚಿತ್ರರಂಗಕ್ಕೆ ಕರೆ ನೀಡಿದರು.

ADVERTISEMENT
Siddaramaiah : ನಾವೆಲ್ಲ ಮನುಷ್ಯರು  ಎಲ್ಲರನ್ನೂ ಪ್ರೀತಿ .ಸ್ನೇಹದಿಂದ  ಕಾಣಬೇಕು #pratidhvani #siddaramaiah

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ ಎಂದು ಕರೆ ನೀಡಿದರು.

ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು ಎಂದು ಸ್ಮರಿಸಿದರು.

Prakash raj : ನಂಗೆ ಪ್ರತಿರೋಧ ಇದೆ #pratidhvani #prakashraj #filmfestival #bengaluru #siddaramaiah

ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನ ಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನೆರವಾಗಲಿ ಎಂದರು.

ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮ ಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರ ಮಾಧ್ಯಮ‌ ನೆರವಾಗಬೇಕು.ಇತರೆ ದೇಶಗಳಲ್ಲಿ‌ನ‌ ಮಾನವೀಯ ಸಂಬಂಧಗಳು, ಇತರೆ ದೇಶಗಳಲ್ಲಿ ಆಚರಣೆಯಲ್ಲಿರುವ ಸಮ ಸಮಾಜದ ಆಚರಣೆಗಳು ಎಲ್ಲವನ್ನೂ ಅರ್ಥ ಮಾಡಿಕೊಳ್ಳಲು ನೆರವಾಗುತ್ತದೆ. ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಸಿದ್ಧವಿದೆ. ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲು ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.

Police : 4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ  #pratidhvani

ಪ್ರಕಾಶ್ ರಾಜ್ ಸಿನಿಮಾಗೆ ಸೀಮಿತವಾಗಿಲ್ಲ

ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಅವರ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಸಿನಿಮಾಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಶೋಷಿತ, ರೈತ, ದಲಿತ, ಹಿಂದುಳಿದವರು ಮತ್ತು ಸಂವಿಧಾನದ ಆಶಯಗಳ‌ ಪರವಾಗಿ ಹೋರಾಡುತ್ತಿದ್ದಾರೆ. ಇವರ ಈ ಸಾಮಾಜಿಕ ಬದ್ಧತೆ ಅಭಿನಂದನೀಯ ಎಂದು ಹೇಳಿದರು.

Tags: 17th Bangalore International Film FestivalBIFFesCM SiddaramaiahKannadakannada movieskannada newsKarnatakasandalwood
Previous Post

ಅಪರೂಪದ ದೃಶ್ಯ: ಒಂದೇ ವೇದಿಕೆಯಲ್ಲಿ ಬಿ.ಎಲ್ ಸಂತೋಷ್–ಡಿ.ಕೆ ಶಿವಕುಮಾರ್

Next Post

ಬಿಜಿಪಿ ಸಂಸದರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್‌

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
Next Post
ಬಿಜಿಪಿ ಸಂಸದರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್‌

ಬಿಜಿಪಿ ಸಂಸದರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada