• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ ಡಿ ವೈ ಚಂದ್ರಚೂಡ್​

Any Mind by Any Mind
November 25, 2023
in ಕರ್ನಾಟಕ, ದೇಶ
0
ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ  ಡಿ ವೈ ಚಂದ್ರಚೂಡ್​
Share on WhatsAppShare on FacebookShare on Telegram

ADVERTISEMENT

ದೇಶದಲ್ಲಿನ ಜಾತಿ ವ್ಯವಸ್ಥೆಗೆ ಇತಿಹಾಸವಿದ್ದು, ಪ್ರಸ್ತುತದಲ್ಲಿಯೂ ಮುಂದುವರೆಯುತ್ತಿದೆ. ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಭರವಸೆಯ ಬೆಳಕಿದ್ದಂತೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್​ ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಲಾ ಏಷ್ಯಾದ 36ನೇ ಸಮಾವೇಶದ ಭಾಷಣದಲ್ಲಿ ಮಾತನಾಡಿ, ಪ್ರಸ್ತುತದ ದಿನಗಳಲ್ಲಿಯೂ ಜಾತಿ ವ್ಯವಸ್ಥೆ ಮುಂದುವರೆಯುತ್ತಿದೆ. ಸಮಾಜದಲ್ಲಿನ ಅಸಮಾನತೆಗಳನ್ನು ಹೋಗಲಾಡಿಸಲು ದೃಢ ನಿರ್ಧಾರಗಳು ಹಾಗೂ ಮೀಸಲಾತಿ ವ್ಯವಸ್ಥೆ ಭರವಸೆಯ ಬೆಳಕಾಗಿದೆ ಎಂದು ಸಿಜೆಐ ಚಂದ್ರಚೂಡ್​ ಹೇಳಿದರು.

ಅಸಮಾನತೆಯನ್ನು ಶಾಶ್ವತವಾಗಿ ಕಾನೂನಿನ ಅಂತರ್ಗತ ಸಂಕೀರ್ಣತೆಗಳಾಗಿ ಒಪ್ಪಿಕೊಳ್ಳಬೇಕಾಗಿದೆ. ಕಾನೂನಿನಲ್ಲಿ ಅಂತರ್ಗತವಾಗಿರುವ ಕೆಲವು ಸಂಕೀರ್ಣ ವ್ಯವಸ್ಥೆಗಳು ಸಮಾಜವನ್ನು ವಿಭಜನೆಗೊಳಿಸುತ್ತಿವೆ. ಈ ವಿಚಾರದಲ್ಲಿ ನಮ್ಮ ದೃಷ್ಟಿಕೋನವನ್ನು ವಿಸ್ತರಣೆ ಮಾಡಬೇಕು. ಸಾರ್ವಭೌಮತ್ವದ ಕಲ್ಪನೆಯ ಮಧ್ಯದಲ್ಲಿ ಬಹುತ್ವ ಒಳಗೊಂಡಿರುವಂತೆ ಮಾಡಬೇಕಾಗಿದೆ. ಸಕಾರಾತ್ಮಕ ಕಾರ್ಯವು ಪರಿವರ್ತನೆಯಿಂದ ಹೊರ ಬರುತ್ತದೆ. ಇದು ಹಳೆ ಜಾತಿಯ ಅಸಮಾನತೆಗಳನ್ನು ಹೋಗಲಾಡಿಸುವ ಭರವಸೆಯ ದಾರಿದೀಪವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.

ಸೈದ್ಧಾಂತಿಕ ವಿಚಾರದಲ್ಲಿ ಜ್ಞಾನ ಎಂಬುದು ತಟಸ್ಥವಾಗಿರುವ ನಿಂತ ನೀರಲ್ಲ. ಅಧಿಕಾರದ ಆಧಾರದಲ್ಲಿ ಬದಲಾಗುತ್ತಿರುತ್ತದೆ. ಜತೆಗೆ, ನಮ್ಮದೇ ಸ್ವಾತಂತ್ರ್ಯವು ರೂಪಾಂತರಗೊಂಡು ಬದಲಾಗುತ್ತಿರುತ್ತದೆ. ಸಮಾಜದ ಆಧಾರವಾಗಿರುವ ವ್ಯವಸ್ಥಿತ ತಾರತಮ್ಯ ತೊಡೆದುಹಾಕಲು ವಿಭಿನ್ನ ಗುರುತುಗಳಿರುತ್ತವೆ. ಉದಾಹರಣೆಗೆ, ಅಂಗವಿಕಲರು ಅರ್ಹತೆಗಳನ್ನು ಗುರುತಿಸಲು ಪ್ರಮಾಣಪತ್ರ ಪಡೆಯಲು ಸೂಚಿಸಲಾಗುತ್ತಿದ್ದು, ಈ ರೀತಿಯಲ್ಲಿ ಸೂಚನೆ ಮಾನದಂಡಗಳನ್ನು ರೂಪಿಸಲು ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಇದರಿಂದಾಗಿ ಅವರಿಗೆ ಪ್ರಯೋಜನ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗದ ಪರಿಸ್ಥಿತಿ ಎದುರಾಗುತ್ತಿದೆ. ಇಂತಹ ವಿಚಾರಗಳಲ್ಲಿ ಆತ್ಮಾವಲೋಕನ ಮಾಡಿಕೊಳ್ಳುವುದಕ್ಕೂ ಮುನ್ನ ಅಂಗವಿಕಲರಿಗೆ ರಕ್ಷಣೆ ನೀಡುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ನಾನು ಕನ್ನಡಕ ಹಾಕಿಕೊಳ್ಳುತ್ತೇನೆ. ಆದರೆ ನನ್ನನ್ನು ಅಂಗವಿಕಲ ಎಂದು ಪರಿಗಣಿಸಲು ಆಗುವುದಿಲ್ಲ. ನನ್ನಂತಹ ಜನರು ಯಾವುದು ಅವಕಾಶದಿಂದ ವಂಚಿತರಾಗುವುದಿಲ್ಲ. ಆದರೆ ವ್ಯವಸ್ಥಿತ ಅಡೆತಡೆಗಳು ಮತ್ತು ಅಸಮಾನತೆಗಳನ್ನು ತೊಡೆದುಹಾಕುವುದು ಮತ್ತು ಸ್ವಾತಂತ್ರ್ಯವನ್ನು ನೆನಪಿಟ್ಟುಕೊಳ್ಳುವುದು ನಮ್ಮ ಕರ್ತವ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

ದುಬೈಗೆ ಕರೆದುಕೊಂಡು ಹೋಗಿಲ್ಲ ಎಂದು ಪತಿಯನ್ನು ಹೊಡೆದು ಸಾಯಿಸಿದ ಪತ್ನಿ

Next Post

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

Related Posts

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!
Top Story

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

by ಪ್ರತಿಧ್ವನಿ
July 12, 2026
0

‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ...

Read moreDetails
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

July 12, 2026
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ.ಕೆ ಶಿವಕುಮಾರ್

July 12, 2026
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

July 12, 2026
ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

July 12, 2026
Next Post
ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada