ನ್ಯಾಯಾಲಯಗಳಲ್ಲಿ ಕ್ಷುಲ್ಲಕ ದಾವೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು, ಸಾರ್ವಜನಿಕ ಹಿತಾಸಕ್ತಿ ಅರ್ಜಿ ( PIL) ಪರಿಕಲ್ಪನೆ ಈಗ ವೈಯಕ್ತಿಕ ಹಿತಾಸಕ್ತಿ ಮೊಕದ್ದಮೆಯಾಗಿ ಬದಲಾಗಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಮುಖ್ಯಮಂತ್ರಿಗಳ ಜಂಟಿ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ರಮಣ, ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ದುರ್ಬಳಕೆ ಕುರಿತು ಕಳವಳ ವ್ಯಕ್ತಪಡಿಸಿದ ರಮಣ ಇತ್ತೀಚಿನ ದಿನಗಳಲ್ಲಿ ವೈಯಕ್ತಿಕ ಹಿತಾಸಕ್ತಿ ಅರ್ಜಿಯಾಗಿ ಬಳಸಲಾಗುತ್ತಿದೆ. ಕೆಲವೊಮ್ಮೆ ಯೋಜನೆಗಳನ್ನು ಸ್ಥಗಿತಗೊಳಿಸಲು ಅಥವಾ ಸಾರ್ವಜನಿಕ ಅಧಿಕಾರಿಗಳ ಮೇಲೆ ಒತ್ತಡ ಹೇರಲು ದುರುಪಯೋಗವಾಗುತ್ತಿದೆ ಎಂದು ಹೇಳಿದರು.
ನಮ್ಮ ದೇಶದ ಸಂವಿಧಾನವು ಮೂರು ಅಂಗಗಳ ನಡುವೆ ಅಧಿಕಾರವನ್ನು ಪ್ರತ್ಯೇಕಿಸುತ್ತದೆ ಮತ್ತು ಮೂರು ಅಂಗಗಳ ನಡುವಿನ ಸಾಮರಸ್ಯವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಾವು ನಮ್ಮ ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ ಎಚ್ಚರದಿಂದರಬೇಕು ಎಂದು ಹೇಳಿದ್ದಾರೆ.
ಮಾತನಾಡುವ ವೇಳೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ದುರ್ಬಳಕೆ ಕುರಿತು ಕಳವಳ ವ್ಯಕ್ತಪಡಿಸಿದ ರಮಣ ಇತ್ತೀಚಿನ ದಿನಗಳಲ್ಲಿ ವೈಯಕ್ತಿಕ ಹಿತಾಸಕ್ತಿ ಅರ್ಜಿಯಾಗಿ ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.