ರಾಮನಗರ: ಜೆಡಿಎಸ್ ಕಾರ್ಯಕರ್ತರನ್ನು ವೇದಿಕೆ ಬಳಿ ಬಿಡಲಿಲ್ಲ ಎಂಬ ಕಾರಣಕ್ಕೆ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ.
ಹಾರೋಹಳ್ಳಿ ತಾಲ್ಲೂಕು ಉದ್ಘಾಟನೆ ಕಾರ್ಯಕ್ರಮದ ವೇಳೆ ಶಾಸಕಿ ಅನಿತಾ ಕುಮಾರಸ್ವಾಮಿ ಜೊತೆ ವೇದಿಕೆ ಬಳಿ ಬರುತ್ತಿದ್ದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ತಡೆದದ್ದು ವಾಗ್ವಾದಕ್ಕೆ ಕಾರಣವಾಗಿದೆ.
ಮಾತ್ರವಲ್ಲದೇ ಕ್ಷೇತ್ರದ ಶಾಸಕರು ಅಧ್ಯಕ್ಷತೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.
ಅನಿತಾ ಕುಮಾಸ್ವಾಮಿ ಅಧ್ಯಕ್ಷರ ಅವರ ಹೆಸರು ಚಿಕ್ಕದಾಗಿ ಹಾಕಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೆಸರು ಕೊನೆಯಲ್ಲಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.













