ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನ ಭೇಟಿಯಾಗಿದ್ದಾರೆ. ಸಿಎಂ ಜೊತೆ ರಾಜ್ಯ ಸಚಿವ ಬಿ.ಝಡ್ ಜಮೀರ್ ಅಹಮದ್ ಖಾನ್, ಶಾಸಕ ಬೈರತಿ ಸುರೇಶ್ ಕೂಡ ಉಪಸ್ಥಿತರಿದ್ರು.
ಹೆಚ್ಚು ಓದಿದ ಸ್ಟೋರಿಗಳು
ಈ ಕುರಿತು ಟ್ವಿಟ್ ಮಾಡಿರುವ ಎಂ.ಬಿ ಪಾಟೀಲ್ “ನವದೆಹಲಿಯಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಬರ್ಟ್ ವಾದ್ರಾ ಅವರನ್ನು ಭೇಟಿ ಮಾಡಲಾಯಿತು. ಈ ವೇಳೆ ಸಚಿವರಾದ ಜಮೀರ್ ಅಹಮದ್ ಖಾನ್, ಶಾಸಕರಾದ ಬೈರತಿ ಸುರೇಶ್ ಇದ್ದರು” ಎಂದು ತಿಳಿಸಿದ್ದಾರೆ.

ಸದ್ಯದ ಮಟ್ಟಿಗೆ ಸಿಎಂ ಸಿದ್ದು ಸಚಿವ ಸಂಪುಟದಲ್ಲಿ ಯಾರೆಲ್ಲ ಇರಲಿದ್ದಾರೆ ಅನ್ನೋ ಕುತೂಹಲ ಎಲ್ಲೆಡೆ ಮನೆ ಮಾಡಿದ್ದು ಈಗಾಗಲೇ ಸಾಕಷ್ಟು ಮಂದಿ ಶಾಸಕರು ದೆಹಲಿಗೆ ಭೇಟಿ ನೀಡಿ ತಮಗೂ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ನ ಬಳಿ ಲಾಭಿಯನ್ನ ಮಾಡಿದ್ದಾರೆ.

ಇನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಈಗಾಗಲೇ ಸಚಿವ ಸಂಪುಟದಲ್ಲಿ ಯಾರೆಲ್ಲಾ ಇರಬೇಕು ಎಂಬುದರ ಕುರಿತು ಚರ್ಚೆಯನ್ನು ನಡೆಸಿದ್ದಾರೆ ಎನ್ನಲಾಗುತ್ತಿದೆ.

ಆದರೆ ಈ ಬಾರಿಯ ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯನವರ ಬಣದ ನಾಯಕರುಗಳು ಸಚಿವರಾಗ್ತಾರಾ? ಅಥವಾ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬಣದ ಶಾಸಕರುಗಳು ಸಚಿವರಾಗುತ್ತಾರಾ? ಎಂಬ ಹಲವು ಪ್ರಶ್ನೆಗಳಿಗೆ ಇನ್ನೆಷ್ಟೇ ಉತ್ತರ ಸಿಗಬೇಕಾಗಿದೆ