• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾವೇರಿ ಸಂಕಷ್ಟಕ್ಕೆ ಒಗ್ಗಟ್ಟೇ ಪರಿಹಾರ: ಸರ್ವಪಕ್ಷ ಸಭೆಯಲ್ಲಿ ಸಿಎಂ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
August 2, 2026
in Top Story
0
ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ, ರಾಜ್ಯದ ಹಿತವೇ ಮುಖ್ಯ:  ಸಿಎಂ ಡಿ.ಕೆ. ಶಿವಕುಮಾರ್ ಕರೆ
Share on WhatsAppShare on FacebookShare on Telegram

ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜಕೀಯ ಭೇದಭಾವಕ್ಕೆ ಅವಕಾಶವಿಲ್ಲ. ರಾಜ್ಯದ ಹಾಗೂ ರೈತರ ಹಿತಾಸಕ್ತಿಯನ್ನು ಕಾಪಾಡುವ ವಿಷಯದಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ಒಂದಾಗಿ ಕೆಲಸ ಮಾಡಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ಭಿನ್ನಾಭಿಪ್ರಾಯಗಳಿದ್ದರೂ ರಾಜ್ಯದ ಹಿತದ ಪ್ರಶ್ನೆ ಬಂದಾಗ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಿರುವುದು ಕರ್ನಾಟಕದ ಶಕ್ತಿ ಎಂದು ಹೇಳಿದರು.

ADVERTISEMENT
ತಪ್ಪಿತಸ್ಥರು ನಗುತ್ತಿದ್ದಾರೆ, ನಿರಪರಾಧಿಗಳು ಅಳುತ್ತಿದ್ದಾರೆ | Rajya Sabha ।  MallikarjunKharge

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದಲ್ಲಿ ಉಂಟಾಗಿದ್ದ ಭೀಕರ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು 9.9 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕೂಡ ನೀರು ಬಿಡುವಂತೆ ಸೂಚನೆ ನೀಡಿತ್ತು. ಆದರೆ ರಾಜ್ಯ ಸರ್ಕಾರ ಈ ಆದೇಶವನ್ನು ಪ್ರಶ್ನಿಸಿ ಈಗಾಗಲೇ ಮೇಲ್ಮನವಿ ಸಲ್ಲಿಸಿದೆ ಎಂದು ತಿಳಿಸಿದರು.CWRC ಹಾಗೂ CWMA ಸಭೆಗಳಿಗೂ ಮುನ್ನ ನವದೆಹಲಿಯಲ್ಲಿ ಕೇಂದ್ರ ಸಚಿವರು ಹಾಗೂ ಕರ್ನಾಟಕದ ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದೆ. ಪಕ್ಷಭೇದ ಮರೆತು ಎಲ್ಲರೂ ರಾಜ್ಯದ ಪರವಾಗಿ ನಿಂತಿದ್ದು, ಅವರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸಿಎಂ ಹೇಳಿದರು.

PM Modi in Mysuru: ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಡಿಕೆಶಿವಕುಮಾರ್ ಭಾಷಣ ಹೇಗಿತ್ತು ನೋಡಿ

 

ಕೇಂದ್ರ ಜಲಸಂಪನ್ಮೂಲ ಸಚಿವ ಸಿ.ಆರ್. ಪಾಟೀಲ್ ಅವರು ಕಾವೇರಿ ಮಾತ್ರವಲ್ಲದೆ ಕೃಷ್ಣಾ ಹಾಗೂ ತುಂಗಭದ್ರಾ ಯೋಜನೆಗಳ ವಿಚಾರದಲ್ಲಿಯೂ ಉತ್ತಮ ಸಹಕಾರ ನೀಡಿದ್ದಾರೆ. ನವಿಲೆ ಸಮತೋಲನ ಅಣೆಕಟ್ಟೆ, ಕೃಷ್ಣಾ–ಗೋದಾವರಿ–ಕಾವೇರಿ ನದಿ ಜೋಡಣೆ ಸೇರಿದಂತೆ ಹಲವು ಯೋಜನೆಗಳಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ತಿಳಿಸಿದರು.ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ.

 

 

ಪ್ರಸ್ತುತ ರಾಜ್ಯದಲ್ಲಿ ಸುಮಾರು 57 ಟಿಎಂಸಿ ನೀರು ಲಭ್ಯವಿದ್ದು, ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಡಲು ಸಾಧ್ಯವಿಲ್ಲ. ಆದ್ದರಿಂದ ಸಹಜ ಹರಿವಿನ ಭಾಗವಾಗಿ ನೀರು ಹೊರಹರಿಯುತ್ತಿದೆ ಎಂದು ವಿವರಿಸಿದರು.ರಾಜ್ಯದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಈಗಾಗಲೇ ಬೆಳೆದಿರುವ ಬೆಳೆಗಳ ರಕ್ಷಣೆಯ ದೃಷ್ಟಿಯಿಂದ ಕೆಆರ್‌ಎಸ್ ಹಾಗೂ ಕಬಿನಿ ಕಾಲುವೆಗಳಿಗೆ ನೀರು ಹರಿಸಲಾಗಿದೆ. ಹಿರಿಯ ನಾಯಕರು ರಾಜ್ಯದ ಹಿತದೃಷ್ಟಿಯಿಂದ ಸಭೆಯಲ್ಲಿ ಭಾಗವಹಿಸಿದ್ದು, ಅವರ ಸಲಹೆಗಳನ್ನು ಸರ್ಕಾರ ಗೌರವದಿಂದ ಸ್ವೀಕರಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: bengaluru newsCauveryCauvery RiverCR PatilCWMACWRCDK ShivakumarKabini DamKARNATAKA CMKarnataka Farmerskarnataka newsKarnataka Politicskaveri water disputeKRS DamTamil NaduWater Sharing
Previous Post

ತಮಿಳುನಾಡು ಸಿಎಂ ಭೇಟಿಗೆ ಸಮಯವಿಲ್ಲ, ಮೊದಲು ಪರಿಸ್ಥಿತಿ ತಿಳಿಯಾಗಲಿ: ಡಿ.ಕೆ. ಶಿವಕುಮಾರ್

Next Post

“ಕರ್ನಾಟಕ–ತಮಿಳುನಾಡು ಭಾರತ-ಪಾಕಿಸ್ತಾನವಲ್ಲ: ಮಾಣಿಕಂ ಟ್ಯಾಗೋರ್”

Related Posts

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
Top Story

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಹೊಸ ತಿರುವು ಸಿಕ್ಕಿದ್ದು, ಅವರನ್ನು ಒತ್ತಡ ಹೇರಿ ಹಾಗೂ ದಬಾಯಿಸಿ ರಾಜೀನಾಮೆ ಕೊಡಿಸಲಾಗಿದೆ...

Read moreDetails
ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

August 7, 2026
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
Next Post
“ಕರ್ನಾಟಕ–ತಮಿಳುನಾಡು ಭಾರತ-ಪಾಕಿಸ್ತಾನವಲ್ಲ: ಮಾಣಿಕಂ ಟ್ಯಾಗೋರ್”

"ಕರ್ನಾಟಕ–ತಮಿಳುನಾಡು ಭಾರತ-ಪಾಕಿಸ್ತಾನವಲ್ಲ: ಮಾಣಿಕಂ ಟ್ಯಾಗೋರ್"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada