ಬೆಂಗಳೂರು: ಇಂದು ಸಿಎಂ ಬಸವರಾಜ ಬೊಮ್ಮಾಯಿ ತುಂಬಾ ದಿನಗಳಿಂದ ಬೇಡಿಕೆ ಇಟ್ಟಿದ್ದ ಸರ್ಕಾರಿ ನೌಕರರ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಮಾರ್ಚ್ ಗೆ ಜಾರಿಗೊಳಿಸೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೋಷಣೆ ಮಾಡಿದ್ದಾರೆ.
ಬಜೆಟ್ ಮೇಲಿನ ಚರ್ಚೆಯ ವೇಳೆಯಲ್ಲಿ ಮಾತನಾಡಿದಂತ ಸಿಎಂ ಈಗಾಗಲೇ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ ಮಾಡಲಾಗಿದೆ ಆಯೋಗದ ಶಿಫಾರಸ್ಸು ಆಧಿರಿಸಿ ಕ್ರಮ ವಹಿಸಲು 2023-24ನೇ ಸಾಲಿನ ಬಜೆಟ್ ನಲ್ಲಿ ಹಣವನ್ನು ಹೊಂದಿಸಿಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ನಮ್ಮ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಬದ್ಧ 7ನೇ ವೇತನ ಆಯೋಗದಿಂದ ತಕ್ಷಣ ಮಧ್ಯಂತರ ವರದಿ ಪಡೆದುಕೊಂಡು ಇನ್ನು ಒಂದು ತಿಂಗಳಲ್ಲಿ ಯೋಜನೆಯನ್ನು ಜಾರಿಗೊಳಿಸುವಂತೆ ಸೂಚಿಸಲಾಗುವುದು. ಮಧ್ಯಂತರ ವರದಿಯನ್ನು ಅವಲೋಕಿಸಿ 2023-24ನೇ ಸಾಲಿನಿಂದಲೇ ಜಾರಿಗೊಳಿಸಲಾಗಲು ಸಿದ್ಧರಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.