ಬಾಗಲಕೋಟೆ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಜನಪ್ರತಿನಿಧಿಗಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗುತ್ತಿದ್ದಾರೆ. ಈ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ಪರವಾಗಿ ನಟ ಸುದೀಪ ಪ್ರಚಾರ ಮಾಡೋದಾಗಿ ಹೇಳಿದ್ದರು. ಇದಾದ ಬಳಿಕ ಸಿಎಂ ಬೊಮ್ಮಾಯಿ ಪರ ನಟ ಸುದೀಪ ಚುನಾವಣಾ ಅಖಾಡಕ್ಕೆ ಇಳಿಯೋದು ಯಾವಾಗ ಎಂಬ ಪ್ರಶ್ನೆ ಹುಟ್ಟಿತ್ತು.
ಇಂದು ಈ ವಿಚಾರವಾಗಿ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮುಗಿದ ಬಳಿಕ ಸುದೀಪ್ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ ಎಂದಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಶಿಗ್ಗಾವಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದು ನಾಮಪತ್ರ ಸಲ್ಲಿಸಲಿರುವ ವಿವಿಧ ಅಭ್ಯರ್ಥಿಗಳಿಗೆ ಸಾಥ್ ನೀಡ್ತಿದ್ದಾರೆ.