ಧಾರವಾಡ : ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ರಾಜ್ಯದ ಜನತೆಗೆ ಗ್ಯಾರಂಟಿ ಕಾರ್ಡ್ ನೀಡುತ್ತಿದೆ. ಆದರೆ ಚುನಾವಣೆ ಮುಗಿದ ಬಳಿಕ ಈ ಗ್ಯಾರಂಟಿ ಕಾರ್ಡ್ ಗಳಗಂಟಿ ಆಗುತ್ತದೆಯಷ್ಟೇ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಧಾರವಾಡದ ಕರಡಿಗುಡ್ಡ ಗ್ರಾಮದಲ್ಲಿ ನಡೆದ ಜಯವಾಹಿನಿ ಯಾತ್ರೆಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬ ದುರಾಸೆಯಿಂದ ಈ ರೀತಿ ಗ್ಯಾರಂಟಿ ಕಾರ್ಡ್ಗಳನ್ನು ಹಂಚುತ್ತಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೇ ಅನೇಕ ಯೋಜನೆಗಳು ಜನರಿಗೆ ತಲುಪಿರಲಿಲ್ಲ ಎಂದು ಹೇಲಿದ್ದಾರೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೆರೆ ಹಾನಿಯಿಂದ ಮನೆ ಹಾಳಾದರೆ 2 ಸಾವಿರ ರೂಪಾಯಿ ಪರಿಹಾರ ನೀಡುತ್ತಿದ್ದರು. ಆದರೆ ಯಾವುದೇ ರಾಜ್ಯದಲ್ಲಿ ಇಲ್ಲದ ಮೊತ್ತದ ಪರಿಹಾರವನ್ನು ನಾವು ನೀಡಿದ್ದೇವೆ. ಸಂಕಷ್ಟದಲ್ಲಿರುವ ರೈತರ ಕಷ್ಟಕ್ಕೆ ಆಸರೆಯಾಗಿದ್ದೇವೆ ಎಂದು ಹೇಳಿದ್ರು.