2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ಇಂದು ಕಾಂಗ್ರೆಸ್ ಪಕ್ಷ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇಂದು ಕುಂದಗೋಳದಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಆರ್ ಪಾಟೀಲ ಪರ ಪ್ರಚಾರ ನಡೆಸಿ ಮತ್ನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ʻಕಾಂಗ್ರೆಸ್ ಇವತ್ತು ಪ್ರಣಾಳಿಕೆ ಬಿಡುಗಡೆ ಮಾಡಿದೆ. ನಾವು ಘೋಷಣೆ ಮಾಡಿರುವ ಯೊಜನೆಗಳನ್ನೇ ಅವರು ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ನವರು ಘೋಷಣೆ ಮಾಡಿರುವ ದಗಾಬಾಜಿ ಪ್ರಣಾಳಿಕೆ ಇದಾಗಿದೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ರು.
ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ʻಕುಂದಗೋಳ ತಾಲೂಕಿಗೆ ನಾನು ಬಂದಾಗ ಭಾವನಾತ್ಮಕವಾಗುತ್ತೇನೆ . ನನ್ನ ಬಹುತೇಕ ಬಾಲ್ಯವನ್ನು ಇಲ್ಲೇ ಕಳೆದಿದ್ದೇನೆ. ಕಮಡೊಳ್ಳಿ, ಸಂಶಿ, ಗುಡಗೇರಿ ಇಲ್ಲಿಯೇ ತಿರುಗಾಡುತ್ತಿದ್ದೇವು. ನಮ್ಮ ತಂದೆ ಇಲ್ಲಿನ ರೈತರ ಸುಮಾರು 30 ಸಾವಿರ ಎಕರೆ ಜಮೀನು ಬಿಡಿಸಿಕೊಟ್ಟಿದ್ದರು. ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಜಯ ಗಳಿಸಿದ್ದರು ಎಂದರು. ಕಾಂಗ್ರೆಸ್ ನವರು ಇವತ್ತು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಇದಕ್ಕೂ ಮೊದಲು ಗ್ಯಾರೆಂಟಿ ಕಾರ್ಡ್ ನೀಡಿದ್ದಾರೆ. 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಕೋವಿಡ್ ನಂತರ ನಾವು ಈಗಾಗಲೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. ಮೋದಿ ಅಕ್ಕಿಗೆ ತಮ್ಮ ಗೋಣಿ ಚೀಲ ಹಾಕಿ ಅದಕ್ಕೆ ತಮ್ಮ ಫೋಟೊ ಹಾಕಿ ಕೊಂಡಿದ್ದಾರೆ. ಮೇ 10 ರವರೆಗೆ ಇವರ ಗ್ಯಾರೆಂಟಿ, ಆ ಮೇಲೆ ಗಳಗಂಟಿ ಅಂತ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ರು.