ತುಮಕೂರು : ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಡೆ ನೀಡಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ದೊಡ್ಡರಾಂಪುರ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದೆ.

ಸಿಸಿ ರಸ್ತೆ ಕಾಮಗಾರಿಗೆ ಅಧಿಕಾರಿಗಳು ತಡೆ ಹಿಡಿದಿದ್ದಾರೆ. ಸುಮಾರು 40 ಲಕ್ಷ ರೂಪಾಯಿ ಮೌಲ್ಯದ ಸಿಸಿ ರಸ್ತೆ ಕಾಮಗಾರಿ ನಡೆಸಲಾಗಿತ್ತು. ದೇವರಾಜು ಅರಸ್ ಮೆಟ್ರಿಕ್ ಬಾಲಕರ ವಿದ್ಯಾರ್ಥಿ ನಿಯಲದ ಬಳಿಕ ಕಾಮಗಾರಿ ನಡೆಯುತ್ತಿತ್ತು.
ಕಾಮಗಾರಿಗೆ ತಡೆ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಯಾಕೆ ಕಾಮಗಾರಿ ನಿಲ್ಲಿಸಿದ್ದೀರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ .