ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಯಾರೇ ಆಗಲೀ ಆರೋಪ ಮಾಡುವ ಮುನ್ನ ಸಾಕ್ಷ್ಯಾಧಾರವನ್ನು ಇಟ್ಟುಕೊಂಡು ಮಾತನಾಡಬೇಕು ಜವಾಬ್ದಾರಿಯುತ ವಿರೋಧ ಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ಹಿಟ್ ಅಂಡ್ ರನ್ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಆಢಳಿತಾವಧಿಯಲ್ಲಿ ಹಲವು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಗಳು ನಡೆದಿದೆ ಆ ಸಮಯದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಈಗ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ ಅವರ ಪಕ್ಷದ ಮುಖಂಡರ ಬಂಧನವಾಗಿದೆ ಎಲ್ಲಿ ಅವರ ಬಣ್ಣ ಬಯಲಾಗುತ್ತದೆ ಎಂದಬ ಹೆದರಿಕೆಯಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಹುಸಿ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನಾವು ಬೇರು ಮಟ್ಟದಿಂದ ತನಿಖೆ ನಡೆಸುತ್ತಿದ್ದೇವೆ ಹಗರಣಕ್ಕೆ ಸಂಬಂಧಿಸಿದಂತೆ ಬಂದ ದೂರುಗಳನ್ನೆಲ್ಲಾ ಪರಿಗಣಿಸಿ, ದಾಖಲೆಗಳನ್ನು ಪರಿಶೀಲಿಸಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಸರ್ಕಾರ ತನಿಖೆಯ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ ನಿಷ್ಟುರವಾಗಿ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ತಪ್ಪಿತಸ್ಥರು ಯಾರೇ ಆಗಲೀ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.











