ಬೆಂಗಳೂರು : ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಪ್ರಧಾನಿ ಮೋದಿ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಲಿಂಗಾಯತ ಸಿಎಂ ವಿಚಾರವಾಗಿಯೂ ಮಾತನಾಡಿದ ಅವರು, ಲಿಂಗಾಯತ ಸಿಎಂ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ ಎಂದು ಹೇಳಿದರು. ಯಡಿಯೂರಪ್ಪ ನೇತೃತ್ವದಲ್ಲಿ ಲಿಂಗಾಯತ ನಾಯಕರ ಸಭೆ ನಡೆದ ಕುರಿತು ಮಾತನಾಡಿದ ಅವರುಮ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ಆಗಿದೆ. ಕಾಂಗ್ರೆಸ್ ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು, ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಲಿಂಗಾಯತ ಸಿಎಂ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟ ಪಡಿಸಿದರು.
ಆರ್.ಅಶೋಕ್ ಕನಕಪುರ ಮಿಲಿಟರಿ ಹೋಟೆಲ್ಗೆ ಬಂದು ಹೋಗಿ ಎಂಬ ಡಿಕೆಶಿ ಹೇಳಿಕೆಗೂ ಇದೇ ವೇಳೆ ಪ್ರತ್ಯುತ್ತರ ನೀಡಿದ ಬೊಮ್ಮಾಯಿ, ಮಿಲಿಟರಿ ಹೋಟೆಲ್ನಿಂದಲೇ ಪ್ರಚಾರ ನಡೆಸುತ್ತೇವೆ. ಅಲ್ಲಿ ಸ್ಥಳೀಯ ಸಾಮಾನ್ಯ ಜನರಿರುತ್ತಾರೆ. ಅಂಥ ಸಾಮಾನ್ಯ ಜನರನ್ನು ಡಿಕೆಶಿ ಭೇಟಿ ಮಾಡುವುದಿಲ್ಲ. ಸಾಮಾನ್ಯ ಜನರನ್ನು ಭೇಟಿ ಮಾಡಲು ಅಶೋಕ್ ತೆರಳಲಿದ್ದಾರೆ ಎಂದು ಹೇಳಿದರು.






